Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:1 - ಕನ್ನಡ ಸತ್ಯವೇದವು J.V. (BSI)

1 ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರಮಾಡುತ್ತಿದ್ದನು; ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದದರಿಂದ ಆತನಿಗೆ ಯೂದಾಯದಲ್ಲಿ ಸಂಚಾರಮಾಡುವ ಮನಸ್ಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆಚ್ಯಾ ಮಾನಾ ಜೆಜು ಗಾಲಿಲಿಯಾತ್ ಸಗ್ಳ್ಯಾಕ್ಡೆ ಫಿರುಕ್ ಲಾಗ್ಲೊ. ಜುದೆವ್ ಲೊಕಾ ತೆಕಾ ಜಿವಾನಿ ಮಾರುಕ್ ರಾಕುನ್ಗೆತ್ ಹೊತ್ತೆ, ತಸೆ ಮನುನ್ ತೆಕಾ ಜುದೆಯಾತ್ ಫಿರುಕ್ ನಕ್ಕೊ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:1
19 ತಿಳಿವುಗಳ ಹೋಲಿಕೆ  

ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು


ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟಿದ್ದರೂ ನಿಮ್ಮಲ್ಲಿ ಒಬ್ಬನಾದರೂ ಧರ್ಮಶಾಸ್ತ್ರದಂತೆ ನಡೆಯುವದಿಲ್ಲವಲ್ಲಾ; ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ? ಎಂದು ಹೇಳಿದನು.


ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳ ಸಂಚಾರವನ್ನು ತೀರಿಸಿರುವದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಈ ಎರಡನೆಯ ಸೂಚಕಕಾರ್ಯವನ್ನು ಮಾಡಿದನು.


ಯೋಹಾನನು ಕೊಟ್ಟ ಸಾಕ್ಷಿ ಏನಂದರೆ - ಯೆಹೂದ್ಯರು ಯೆರೂಸಲೇವಿುನಿಂದ ಯಾಜಕರನ್ನೂ ಲೇವಿಯರನ್ನೂ ಅವನ ಬಳಿಗೆ ಕಳುಹಿಸಿ - ನೀನು ಯಾರೆಂದು ಕೇಳಿದ್ದಕ್ಕೆ


ನೀವು ಹಾಗೆ ಮಾಡದೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ; ಅಬ್ರಹಾಮನು ಹೀಗೆ ಮಾಡಲಿಲ್ಲ.


ನೀವು ಅಬ್ರಹಾಮನ ಸಂತಾನದವರು ನಿಜ; ಆದರೂ ನನ್ನ ವಾಕ್ಯವು ನಿಮ್ಮಲ್ಲಿ ಸಾಗದೆ ಇರುವ ಕಾರಣ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.


ಯೆರೂಸಲೇವಿುನವರಲ್ಲಿ ಕೆಲವರು - ಇವನನ್ನಲ್ಲವೇ ಅವರು ಕೊಲ್ಲಬೇಕೆಂದಿರುವದು?


ಅದನ್ನು ಮಹಾಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಸಂದರ್ಭ ನೋಡುತ್ತಿದ್ದರು; ಯಾಕಂದರೆ ಜನರೆಲ್ಲಾ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.


ತರುವಾಯ ಯೇಸು ಗಲಿಲಾಯದ ಸಮುದ್ರದ ಆಚೆಗೆ ಹೋದನು; ಅದಕ್ಕೆ ತಿಬೇರಿಯದ ಸಮುದ್ರವೆಂತಲೂ ಹೇಳುತ್ತಾರೆ.


ಜಾತ್ರೆಯಲ್ಲಿ ಯೆಹೂದ್ಯರು - ಅವನು ಎಲ್ಲಿದ್ದಾನೆಂದು ಆತನನ್ನು ಹುಡುಕುತ್ತಿದ್ದರು.


ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಧಾರಾಳವಾಗಿ ಮಾತಾಡಲಿಲ್ಲ.


ಅದಕ್ಕೆ ಯೆಹೂದ್ಯರು - ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿರುತ್ತಾನೆ? ಗ್ರೀಕರೊಳಗೆ ಚದರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಉಪದೇಶ ಮಾಡಬೇಕೆಂದಿರುತ್ತಾನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು