Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:18 - ಕನ್ನಡ ಸತ್ಯವೇದವು J.V. (BSI)

18 ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆ ಕೊನ್ ಸ್ವತಾಚ್ಯಾ ಅದಿಕಾರ್‍ಯಾನ್ ಬೊಲ್ತ್ಯಾತ್, ತೆನಿ ಅಪ್ನಾಚ್ಯಾ ಅಪ್ನಿ ಮಹಿಮಾ ಜೊಡುನ್ ಘೆವ್ಕ್ ಕಟ್ಪಟ್ತಾತ್. ಖರೆ ಜೆ ಕೊನಾಕ್ ತೆಕಾ ಧಾಡುನ್ ದಿಲ್ಲ್ಯಾಚಿ ಮಹಿಮಾ ಪಾಜೆ ತೊ ನಿಯತ್ತಿಚೊ, ಅನಿ ತೆಚ್ಯಾ ಭುತ್ತುರ್ ಕಾಯ್ಬಿ ಝುಟೆ ಮನ್ತಲೆ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:18
19 ತಿಳಿವುಗಳ ಹೋಲಿಕೆ  

ನಾನು ಮನುಷ್ಯರಿಂದಾಗುವ ಮಾನವನ್ನು ಅಂಗೀಕರಿಸುವದಿಲ್ಲ.


ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮಗೆ ಗೌರವವನ್ನು ಕೊಡಬೇಕೆಂದು ಹೇಳಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ ಇತರರಿಂದಾಗಲಿ ಹೊಂದಲಪೇಕ್ಷಿಸುವವರಾಗಿಲ್ಲ.


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು. ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವದು ಮಾನವಲ್ಲ.


ಅದಕ್ಕೆ ಮೋಶೆ - ನನ್ನ ಗೌರವವನ್ನು ಕಾಪಾಡಬೇಕೆಂದಿದ್ದೀಯೇ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮೀಯವರಗಳನ್ನು ಹೊಂದಿದವರೂ ಪ್ರವಾದಿಸುವರೂ ಆದರೆ ಎಷ್ಟೋ ಒಳ್ಳೇದು ಅಂದನು.


ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು.


ಯೇಸು - ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆ ಹುರುಳಿಲ್ಲದ್ದು; ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ. ನೀವು ಆತನನ್ನು ನಮ್ಮ ದೇವರು ಅನ್ನುತ್ತೀರಿ; ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ.


ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು