Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:26 - ಕನ್ನಡ ಸತ್ಯವೇದವು J.V. (BSI)

26 ನೋಡಿರಿ, ಇವನು ಧಾರಾಳವಾಗಿ ಮಾತಾಡುತ್ತಾನೆ, ಅವರು ಅವನಿಗೆ ಏನೂ ಹೇಳುವದಿಲ್ಲ. ಹಿರೀಸಭೆಯವರು ಇವನೇ ಬರಬೇಕಾದ ಕ್ರಿಸ್ತನೆಂದು ನಿಶ್ಚಯಮಾಡಿಕೊಂಡಿದ್ದಾರೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇಗೋ, ಈತ ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೂ ಈತನಿಗೆ ವಿರುದ್ಧವಾಗಿ ಅವರಾರೂ ಮಾತೆತ್ತುತ್ತಿಲ್ಲ! ಈತನೇ ಲೋಕೋದ್ಧಾರಕನೆಂದು ಆ ಮುಖಂಡರಿಗೆ ಹೊಳೆದಿರಬಹುದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇಗೋ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೆ ಅವರು ಈತನಿಗೆ ಏನೂ ಹೇಳುವುದಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತ ಎಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತರ್‍ಬಿ ತೊ ಹಿತ್ತೆ ಕೊನಾಚೆಬಿ ಭಿಂಯೆನಸ್ತಾನಾ ಬೊಲುಲಾ, ಅನಿ ಕೊನ್ಬಿ ತೆಕಾ ಕಾಯ್ಬಿ ಮನಿನಾ ಹೊಲ್ಯಾತ್! ಖರೆ ಹ್ಯೊಚ್ ಮೆಸ್ಸಿಯಾ ಮನುನ್ ಅಮ್ಚ್ಯಾ ಜಾನ್ತ್ಯಾಕ್ನಿ ಕಳ್ಳೆಕಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:26
21 ತಿಳಿವುಗಳ ಹೋಲಿಕೆ  

ಹಿರೀಸಭೆಯವರಲ್ಲಿಯಾಗಲಿ ಫರಿಸಾಯರಲ್ಲಿಯಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬೇಡಿಗಳಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯಹೊಂದಿದ್ದಾರೆ.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ಆದರೂ ಹಿರೀಸಭೆಯವರಲ್ಲಿಯೂ ಅನೇಕರು ಆತನನ್ನು ನಂಬಿದರು. ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು ಫರಿಸಾಯರಿಗೆ ಅಂಜಿಕೊಂಡು ಅದನ್ನು ಜನರ ಮುಂದೆ ಹೇಳಲಿಲ್ಲ.


ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು.


ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಲ್ಲಿ ತಮ್ಮ ವಿಷಯವಾಗಿ ದೇವರ ಸಂಕಲ್ಪವನ್ನು ನಿರಾಕರಿಸಿದರು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ತರುವಾಯ ಪಿಲಾತನು ಮಹಾಯಾಜಕರನ್ನೂ ಅಧಿಕಾರಿಗಳನ್ನೂ ಪ್ರಜೆಗಳನ್ನೂ ಒಟ್ಟಾಗಿ ಕರಸಿ


ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.


ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ಹೇಳಿದನು; ಬಂದು ಅವನನ್ನು ನೋಡಿರಿ; ಬರತಕ್ಕ ಕ್ರಿಸ್ತನು ಅವನೇ ಏನೋ? ಎಂದು ಹೇಳಲು


ಯೆರೂಸಲೇವಿುನವರಲ್ಲಿ ಕೆಲವರು - ಇವನನ್ನಲ್ಲವೇ ಅವರು ಕೊಲ್ಲಬೇಕೆಂದಿರುವದು?


ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು.


ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು