Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:28 - ಕನ್ನಡ ಸತ್ಯವೇದವು J.V. (BSI)

28 ಯೇಸು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ - ನನ್ನನ್ನು ಬಲ್ಲಿರಿ, ನಾನು ಎಲ್ಲಿಯವನೆಂದು ಬಲ್ಲಿರಿ ನಿಜವೇ. ಆದರೂ ನಾನು ನನ್ನಷ್ಟಕ್ಕೆ ಬಂದವನಲ್ಲ, ನನ್ನನ್ನು ಕಳುಹಿಸಿದಾತನು ನಿಜವಾದವನು; ನೀವು ಆತನನ್ನು ಅರಿತವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸುವು ದೇವಾಲಯದಲ್ಲಿ ಇನ್ನೂ ಉಪದೇಶಿಸುತ್ತಾ, “ಹೌದು, ನಿಮಗೆ ನನ್ನ ಬಗ್ಗೆ ಗೊತ್ತಿದೆ, ನಾನು ಎಲ್ಲಿಂದ ಬಂದೆನೆಂಬುದೂ ನಿಮಗೆ ತಿಳಿದಿದೆ. ಆದರೆ ನಾನು ಬಂದಿರುವುದು ನನ್ನ ಸ್ವಂತ ಅಧಿಕಾರದಿಂದಲ್ಲ. ಸತ್ಯಸ್ವರೂಪನು ನನ್ನನ್ನು ಕಳುಹಿಸಿದ್ದಾನೆ. ನಿಮಗೆ ಆತನು ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ಜೆಜು ದೆವಾಚ್ಯಾ ಗುಡಿತ್ ಶಿಕ್ವುತಾನಾ ಜೆಜುನ್ ಮೊಟ್ಯಾ ಅವಾಜಾನ್, ಮಿಯಾ ಕೊನ್ ಅನಿ ಖೈತ್ನಾ ಯೆಲಾ ಮನುನ್ ತುಮ್ಕಾ ಖರೆಚ್! ಗೊತ್ತ್ ಹಾಯ್ ಕಾಯ್? ಮಿಯಾ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಯೆವ್ಕ್ ನಾ. ಮಾಕಾ ಧಾಡುನ್ ದಿಲ್ಲೊ ಖರೊ ಮಾನುಸ್. ತುಮಿ ತೆಕಾ ವಳ್ಕಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:28
46 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ಅವರು - ನಿನ್ನ ತಂದೆ ಎಲ್ಲಿದ್ದಾನೆ? ಎಂದು ಕೇಳಲು ಯೇಸು - ನೀವು ನನ್ನನ್ನೂ ತಿಳಿದಿಲ್ಲ, ನನ್ನ ತಂದೆಯನ್ನೂ ತಿಳಿದಿಲ್ಲ; ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ತಿಳಿದಿರುವಿರಿ ಅಂದನು.


ನಿಮ್ಮ ವಿಷಯವಾಗಿ ಮಾತಾಡುವದಕ್ಕೂ ನಿಮ್ಮ ಮೇಲೆ ತೀರ್ಪುಮಾಡುವದಕ್ಕೂ ಅನೇಕ ಸಂಗತಿಗಳು ನನಗುಂಟು; ಆದರೆ ನನ್ನನ್ನು ಕಳುಹಿಸಿಕೊಟ್ಟಾತನು ಸತ್ಯವಂತನು; ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.


ಯೇಸು ಅವರಿಗೆ - ನಾನು ಎಲ್ಲಿಂದ ಬಂದವನಾಗಿಯೂ ಎಲ್ಲಿಗೆ ಹೋಗುವವನಾಗಿಯೂ ಇದ್ದೇನೆಂಬದು ನನಗೆ ಗೊತ್ತಿರುವದರಿಂದ ನನ್ನ ವಿಷಯವಾಗಿ ನಾನೇ ಸಾಕ್ಷಿಹೇಳಿಕೊಂಡರೂ ನನ್ನ ಸಾಕ್ಷಿ ನಿಜವಾಗಿರುವದು. ನೀವಾದರೋ ನಾನು ಎಲ್ಲಿಂದ ಬಂದವನು, ಎಲ್ಲಿಗೆ ಹೋಗುವವನು ಎಂಬದನ್ನು ತಿಳಿಯದವರು.


ನಿಮ್ಮ ನಿವಾಸವು ಮೋಸದೊಳಗೇ ಇದೆ; ಅಯ್ಯೋ, ಮೋಸಗಾರರಾಗಿರುವದರಿಂದ ನನ್ನನ್ನು ಅರಿಯಲೊಲ್ಲರು ಎಂದು ಯೆಹೋವನು ಅನ್ನುತ್ತಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಯಾಕಂದರೆ ನನ್ನಷ್ಟಕ್ಕೆ ನಾನೇ ಮಾತಾಡಿದವನಲ್ಲ; ನನ್ನನ್ನು ಕಳುಹಿಸಿಕೊಟ್ಟ ತಂದೆಯೇ - ನೀನು ಇಂಥಿಂಥದನ್ನು ಹೇಳಬೇಕು, ಹೀಗೆ ಹೀಗೆ ಮಾತಾಡಬೇಕು ಎಂಬದಾಗಿ ನನಗೆ ಆಜ್ಞೆಕೊಟ್ಟಿದ್ದಾನೆ.


ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗಂದರೆ ದೇವರು ತನ್ನ ಮಗನ ವಿಷಯವಾಗಿ ಹೇಳಿರುವ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ನಂಬಿಗಸ್ತನಾಗಿರುವ ದೇವರಾಣೆ, ನಾವು ನಿಮಗೆ ಹೇಳುವ ಮಾತು ಒಂದು ಸಾರಿ ಹೌದೆಂದು ಒಂದು ಸಾರಿ ಅಲ್ಲವೆಂದು ಇರುವದಿಲ್ಲ.


ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.


ನೀತಿಸ್ವರೂಪನಾದ ತಂದೆಯೇ, ಲೋಕವಂತೂ ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ; ಮತ್ತು ಇವರು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ತಿಳುಕೊಂಡಿದ್ದಾರೆ.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವದರಿಂದ ಇಂಥದನ್ನು ನಿಮಗೆ ಮಾಡುವರು.


ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂಬದು ಲೋಕಕ್ಕೆ ತಿಳಿದಿರಬೇಕೆಂದು ತಂದೆಯು ನನಗೆ ಕೊಟ್ಟ ಆಜ್ಞೆಯ ಮೇರೆಗೆ ಇದನ್ನು ಮಾಡುತ್ತೇನೆ. ಏಳಿರಿ, ಇಲ್ಲಿಂದ ಹೋಗೋಣ.


ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ತೀರ್ಪುಮಾಡಿದರೂ ನನ್ನ ತೀರ್ಪು ಸರಿಯಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ; ನಾನೂ ನನ್ನನ್ನು ಕಳುಹಿಸಿಕೊಟ್ಟ ತಂದೆಯೂ ಇಬ್ಬರು ಇದ್ದೇವೆ.


ನನ್ನ ವಿಷಯವಾಗಿ ಸಾಕ್ಷಿಹೇಳುವವನು ಮತ್ತೊಬ್ಬನಿದ್ದಾನೆ; ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿ ನಿಜವೆಂದು ಬಲ್ಲೆನು.


ಆತನ ಸಾಕ್ಷಿಯನ್ನು ಒಪ್ಪಿದವನು ದೇವರು ಸತ್ಯವಂತನೆಂಬ ಮಾತಿಗೆ ಮುದ್ರೆ ಹಾಕಿದವನಾಗಿದ್ದಾನೆ.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ನತಾನಯೇಲನು - ಒಳ್ಳೇದೇನಾದರೂ ನಜರೇತಿನಿಂದ ಬರುವದುಂಟೇ? ಅಂದಾಗ ಫಿಲಿಪ್ಪನು - ಬಂದು ನೋಡು ಅಂದನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಇಂಥವನೆಂದು ತಂದೆಯೇ ಹೊರತು ಇನ್ಯಾವನೂ ತಿಳಿದವನಲ್ಲ; ತಂದೆ ಇಂಥವನೆಂದು ಮಗನೇ ಹೊರತು ಇನ್ನಾವನೂ ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಇತ್ತಲಾಗಿ ಅವರು ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.


ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ಯೋಸೇಫನು ಸಹ ತಾನು ದಾವೀದನ ಮನೆತನದವನೂ ಗೋತ್ರದವನೂ ಆಗಿದ್ದದರಿಂದ ಹೆಸರು ಬರಸಿಕೊಳ್ಳುವದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಮರಿಯಳ ಸಂಗಡ ಗಲಿಲಾಯಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದನು.


ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.


ಅವು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಬಿಡವು; ವ್ಯಭಿಚಾರ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ಅರಿಯವು.


ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಜಾತ್ರೆಯ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸುತ್ತಿದ್ದನು.


ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;


ಇವನ ತಂದೆತಾಯಿಗಳನ್ನು ನಾವು ಬಲ್ಲೆವಲ್ಲವೇ. ಈಗ ಇವನು ಪರಲೋಕದಿಂದ ಇಳಿದುಬಂದಿದ್ದೇನೆಂದು ಹೇಳುವದು ಹೇಗೆ? ಅಂದರು.


ಮೋಶೆಯ ಸಂಗಡ ದೇವರು ಮಾತಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ಅರಿಯೆವು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು