Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:32 - ಕನ್ನಡ ಸತ್ಯವೇದವು J.V. (BSI)

32 ಜನರು ಆತನ ವಿಷಯವಾಗಿ ಗುಜುಗುಜು ಆಡಿದ ಈ ಮಾತುಗಳನ್ನು ಫರಿಸಾಯರು ಕೇಳಲು ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯುವದಕ್ಕೆ ಓಲೇಕಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಯೇಸು ಸ್ವಾಮಿಯನ್ನು ಕುರಿತು ಜನರು ಹೀಗೆ ಆಡುತ್ತಿದ್ದ ಗುಸುಗುಸು ಮಾತು ಫರಿಸಾಯರ ಕಿವಿಗೆ ಮುಟ್ಟಿತು. ಅವರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸಲು ಕಾಲಾಳುಗಳನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಲೊಕಾಂಚೊ ತಾಂಡೊ ಜೆಜುಚ್ಯಾ ವಿಶಯಾತ್ ಪುಸ್ವುಸುನ್ ಬೊಲ್ತಲೆ ಸಗ್ಳೆ ಫಾರಿಜೆವಾನಿ ಆಯಿಕ್ಲ್ಯಾನಿ, ತೆಚೆಸಾಟ್ನಿ ತೆನಿ ಅನಿ ಯಾಜಕಾಂಚ್ಯಾ ಮುಖಂಡಾನಿ ಉಲ್ಲ್ಯಾ ರಾಕ್ವಾಲ್ಯಾಕ್ನಿ ಜೆಜುಕ್ ಧರುಕ್ ಮನುನ್ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:32
13 ತಿಳಿವುಗಳ ಹೋಲಿಕೆ  

ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.


ಹೀಗಿರಲಾಗಿ ಯೂದನು ಸಿಪಾಯಿಗಳ ಪಟಾಲಮನ್ನೂ ಮಹಾಯಾಜಕರು ಮತ್ತು ಫರಿಸಾಯರು ಕೊಟ್ಟ ಓಲೇಕಾರರನ್ನೂ ಕರಕೊಂಡು ದೀವಿಟಿಗಳನ್ನೂ ಪಂಜುಗಳನ್ನೂ ಆಯುಧಗಳನ್ನೂ ಹಿಡಿಸಿಕೊಂಡು ಅಲ್ಲಿಗೆ ಬಂದನು.


ಹೀಗಿರಲಾಗಿ ಫರಿಸಾಯರು - ನಿಮ್ಮ ಯತ್ನವೇನೂ ಸಾಗಲಿಲ್ಲ, ನೋಡಿರಿ; ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಅವನು ಅವನನ್ನು ಹಿಡಿದು ತರುವದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿ ಸಮೂಹವು ಪರವಶವಾಗಿ ಮಾತಾಡುವದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವದನ್ನೂ ಕಂಡಾಗ ದೇವರ ಆತ್ಮವು ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆಮಾಡಿಕೊಂಡರು.


ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿ ಬಂದಿದ್ದರು. ಪೇತ್ರನಾದರೋ ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದ ತನಕ ಬಂದು ಒಳಗೆ ಹೊಕ್ಕು ಆತನ ಗತಿ ಏನಾಗುವದೋ ನೋಡಬೇಕೆಂದು ಓಲೇಕಾರರ ಸಂಗಡ ಕೂತುಕೊಂಡನು.


ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.


ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ್ದನ್ನು ಅವರಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು