Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:35 - ಕನ್ನಡ ಸತ್ಯವೇದವು J.V. (BSI)

35 ಅದಕ್ಕೆ ಯೆಹೂದ್ಯರು - ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿರುತ್ತಾನೆ? ಗ್ರೀಕರೊಳಗೆ ಚದರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಉಪದೇಶ ಮಾಡಬೇಕೆಂದಿರುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜುದೆವಾಂಚ್ಯಾ ಅದಿಕಾರ್‍ಯಾನಿ ಅಪ್ನಾಂಚ್ಯಾ ಮದ್ದಿಚ್, “ಅಮ್ಕಾ ಗಾವಿನಸ್ಲ್ಯಾಕ್ಡೆ ಹ್ಯೊ ಖೈ ಜಾವ್ಕ್ ಲಾಗ್ಲಾ? ಹ್ಯೊ ಅಮ್ಚಿ ಲೊಕಾ ಹೊತ್ತ್ಯಾ ಗ್ರಿಕ್ ಶಾರಾಕ್ನಿ ಜಾವ್ನ್ ಶಿಕ್ವುತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:35
29 ತಿಳಿವುಗಳ ಹೋಲಿಕೆ  

ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ -


ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.


ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.


ಇದಲ್ಲದೆ ದೇವಾರಾಧನೆ ಮಾಡಬೇಕೆಂದು ಜಾತ್ರೆಗೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.


ಆ ಸುವಾರ್ತಾಭಿವೃದ್ಧಿಗೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಉಪದೇಶಕನಾಗಿಯೂ ನೇವಿುಸಲ್ಪಟ್ಟೆನು.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇವಿುಸಲ್ಪಟ್ಟೆನು. ನಾನು ಇಂಥವನೆಂಬದು ಸುಳ್ಳಲ್ಲ, ಸತ್ಯವೇ.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ನೀನು ಅನ್ಯಜನರಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ - ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ ಮೋಶೆಯ ಧರ್ಮವನ್ನು ತ್ಯಾಗಮಾಡಬೇಕೆಂಬದಾಗಿ ಬೋಧಿಸುತ್ತೀ ಎಂದು ನಿನ್ನ ವಿಷಯದಲ್ಲಿ ಬಹಳವಾಗಿ ಕೇಳಿದ್ದಾರೆ.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ಆ ಮಾತಿಗೆ ಯೆಹೂದ್ಯರು - ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ ಎಂದು ಮಾತಾಡಿಕೊಂಡರು.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ; ಚದರಿಹೋಗಿದ್ದ ಇಸ್ರಾಯೇಲ್ಯರನ್ನು ಕೂಡಿಸುತ್ತಿದ್ದಾನೆ.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.


ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರಮಾಡುತ್ತಿದ್ದನು; ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದದರಿಂದ ಆತನಿಗೆ ಯೂದಾಯದಲ್ಲಿ ಸಂಚಾರಮಾಡುವ ಮನಸ್ಸಿರಲಿಲ್ಲ.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ ಕುರೇನ್ಯದವರು ಕೆಲವರೂ ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡಲೂ ಮಾತಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದರು.


ಇಕೋನ್ಯದಲ್ಲಿ ಪೌಲ ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಬಲವಾಗಿ ಮಾತಾಡಿದ್ದರಿಂದ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ಬಹುಮಂದಿ ನಂಬುವವರಾದರು.


ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು.


ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.


ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು