Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:6 - ಕನ್ನಡ ಸತ್ಯವೇದವು J.V. (BSI)

6 ಯೇಸು ಅವರಿಗೆ - ನನ್ನ ಸಮಯವು ಇನ್ನೂ ಬಂದಿಲ್ಲ; ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಯೇಸು, “ನನಗೆ ಸೂಕ್ತ ಸಮಯ ಇನ್ನೂ ಬಂದಿಲ್ಲ, ನಿಮಗಾದರೋ ಎಲ್ಲಾ ಸಮಯವೂ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ತನ್ನ ಸಹೋದರರಿಗೆ, “ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ. ನಿಮಗಾದರೋ ಹೋಗಲು ಎಲ್ಲಾ ಸಮಯವೂ ಸರಿಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆಜುನ್ ತೆಂಕಾ, “ಅಜುನ್ ಮಾಜೊ ಸಮಾ ಎಳ್ ಯೆವ್ಕ್ ನಾ. ತುಮ್ಕಾ ಸಗ್ಳೊ ಎಳ್‍ಬಿ ಸಮಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:6
10 ತಿಳಿವುಗಳ ಹೋಲಿಕೆ  

ನೀವೇ ಜಾತ್ರೆಗೆ ಹೋಗಿರಿ; ನನ್ನ ಸಮಯವು ಇನ್ನೂ ಒದಗದೆ ಇರುವದರಿಂದ ನಾನು ಈ ಜಾತ್ರೆಗೆ ಈಗ ಹೋಗುವದಿಲ್ಲವೆಂದು ಹೇಳಿದನು.


ಯೇಸು ಆಕೆಗೆ - ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯವು ಇನ್ನೂ ಬಂದಿಲ್ಲ ಎಂದು ಹೇಳಲು


ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.


ಆತನು - ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ ಅವನಿಗೆ - ನನ್ನ ಕಾಲ ಸಮೀಪವಾಯಿತು, ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬಮಾಡುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಹೇಳಿರಿ ಅಂದನು.


ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.


ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯವಿುತಕಾಲವು ಬಂದದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು