Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:12 - ಕನ್ನಡ ಸತ್ಯವೇದವು J.V. (BSI)

12 ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜುನ್ ಅನಿ ಪರ್ತುನ್ ಲೊಕಾಂಚ್ಯಾಕ್ಡೆ ಬೊಲುನ್ ಅಶೆ ಮಟ್ಲ್ಯಾನ್ “ಮಿಯಾಚ್ ಜಗಾಚೊ ಉಜ್ವೊಡ್ ಜೊ ಕೊನ್ ಮಾಜಿ ಫಾಟ್ ಧರ್ತಾ ತೊ ಕಾಳ್ಕಾತ್ ಚಲಿನಾ, ಖರೆ ತೆಕಾ ಜಿವಿತಾಚೊ ಉಜ್ವೊಡ್ ಘೆವ್ನ್ ರ್‍ಹಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:12
31 ತಿಳಿವುಗಳ ಹೋಲಿಕೆ  

ನನ್ನನ್ನು ನಂಬುವ ಒಬ್ಬನಾದರೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ ಅಂದನು.


ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು.


ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವದು ಎಂದು ಕೀರ್ತನೆಹಾಡುವನು.


ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ, ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು, ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು.


ನೀತಿವಂತರಿಗೋಸ್ಕರ ಪ್ರಕಾಶವೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಬಿತ್ತಲ್ಪಟ್ಟಿವೆ.


ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಅದರ ಬೆಳಕಿನಿಂದ ಸರ್ವಜನಾಂಗದವರು ಸಂಚಾರಮಾಡುವರು; ಭೂರಾಜರು ತಮ್ಮ ವೈಭವವನ್ನು ಅಲ್ಲಿಗೆ ತರುವರು.


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.


ಇವರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮಂಜೂ ಆಗಿದ್ದಾರೆ; ಇಂಥವರ ಪಾಲಿಗೆ ಕಾರ್ಗತ್ತಲೆ ಇಟ್ಟಿರುವದು.


ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ಪಿತೃಗಳ ಬಳಿಗೆ ಸೇರಿ ಅವರಂತೆಯೇ ಎಂದಿಗೂ ಬೆಳಕನ್ನು ಕಾಣದೆ ಇರುವನು.


ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ; ನಂಬಿದರೆ ನೀವು ಬೆಳಕಿನವರಾಗುವಿರಿ ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.


ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು