Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:14 - ಕನ್ನಡ ಸತ್ಯವೇದವು J.V. (BSI)

14 ಯೇಸು ಅವರಿಗೆ - ನಾನು ಎಲ್ಲಿಂದ ಬಂದವನಾಗಿಯೂ ಎಲ್ಲಿಗೆ ಹೋಗುವವನಾಗಿಯೂ ಇದ್ದೇನೆಂಬದು ನನಗೆ ಗೊತ್ತಿರುವದರಿಂದ ನನ್ನ ವಿಷಯವಾಗಿ ನಾನೇ ಸಾಕ್ಷಿಹೇಳಿಕೊಂಡರೂ ನನ್ನ ಸಾಕ್ಷಿ ನಿಜವಾಗಿರುವದು. ನೀವಾದರೋ ನಾನು ಎಲ್ಲಿಂದ ಬಂದವನು, ಎಲ್ಲಿಗೆ ಹೋಗುವವನು ಎಂಬದನ್ನು ತಿಳಿಯದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೇಸು ಅವರಿಗೆ “ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಯೇಸು, ‘ನಾನೇ ನನ್ನ ಪರವಾಗಿ ಸಾಕ್ಷಿ ನೀಡಿದರೂ ನನ್ನ ಸಾಕ್ಷಿಗೆ ಬೆಲೆಯುಂಟು. ಏಕೆಂದರೆ, ನಾನು ಎಲ್ಲಿಂದ ಬಂದೆ, ಎಲ್ಲಿಗೆ ಹೋಗುತ್ತಿರುವೆ, ಎಂದು ನನಗೆ ತಿಳಿದಿದೆ. ನಿಮಗಾದರೋ ನಾನು ‘ಬಂದುದು ಎಲ್ಲಿಂದ, ಹೋಗುವುದು ಎಲ್ಲಿಗೆ’ ಎಂದು ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು, “ಹೌದು, ನಾನೇ ನನ್ನ ಬಗ್ಗೆ ಈ ಸಂಗತಿಗಳನ್ನು ಹೇಳುತ್ತಿದ್ದರೂ ಈ ಸಂಗತಿಗಳು ಜನರ ನಂಬಿಕೆಗೆ ಯೋಗ್ಯವಾಗಿವೆ. ಏಕೆಂದರೆ, ನಾನು ಎಲ್ಲಿಂದ ಬಂದೆನೆಂಬುದೂ ನಾನು ಎಲ್ಲಿಗೆ ಹೋಗುತ್ತೇನೆಂಬುದೂ ನನಗೆ ತಿಳಿದಿದೆ. ನಾನು ನಿಮ್ಮಂಥ ವ್ಯಕ್ತಿಯಲ್ಲ. ನಾನು ಎಲ್ಲಿಂದ ಬಂದೆನೆಂಬುದು ಮತ್ತು ಎಲ್ಲಿಗೆ ಹೋಗುತ್ತೇನೆಂಬುದು ನಿಮಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ಅವರಿಗೆ, “ನಾನೇ ನನ್ನ ವಿಷಯವಾಗಿ ನಾನು ಸಾಕ್ಷಿ ನೀಡಿದರೂ ನನ್ನ ಸಾಕ್ಷಿ ಸತ್ಯವಾದದ್ದು. ಏಕೆಂದರೆ ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆಂದು ನನಗೆ ತಿಳಿದಿದೆ. ಆದರೆ ನಾನು ಎಲ್ಲಿಂದ ಬಂದೆ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಜೆಜುನ್ ಜವಾಬ್ ದಿಲ್ಲ್ಯಾನ್, “ಮಿಯಾ ಮಾಜ್ಯಾಚ್ ವಿಶಯಾತ್ ಸಾಕ್ಷಿ ಸಾಂಗ್ಲ್ಯಾರ್ ತೆಕಾ ಕಿಮ್ಮತ್ ಹಾಯ್ , ಕಶ್ಯಾಕ್ ಮಟ್ಲ್ಯಾರ್ ಮಿಯಾ ಖೈತ್ನಾ ಯೆಲಾ, ಅನಿ ಖೈ ಜಾವ್ಕ್ ಲಾಗ್ಲಾ ಮನುನ್ ಮಾಕಾ ಗೊತ್ತ್ ಹಾಯ್. ತುಮ್ಕಾ ಮಿಯಾ ಖೈತ್ನಾ ಯೆಲಾ ಅನಿ ಖೈ ಜಾವ್ಕ್ ಲಾಗ್ಲಾ ಮನುನ್ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:14
19 ತಿಳಿವುಗಳ ಹೋಲಿಕೆ  

ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ಇನ್ನು ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ.


ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಆ ಮೋಶೆ ಭೂವಿುಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹುಸಾತ್ವಿಕನು.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುವವರೆಂದು ನೆನಸುತ್ತೀರೋ? ನಿಮ್ಮ ಮುಂದೆಯಲ್ಲ, ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತಾಡುವವರಾಗಿದ್ದೇವೆ. ಪ್ರಿಯರೇ, ನಾವು ಮಾತಾಡುವದೆಲ್ಲಾ ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಆಗಿದೆ.


ನಾನು ಹೀಗೆ ಬರೆದು ಬುದ್ಧಿಹೀನನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಕೇವಲ ಅಲ್ಪನಾದರೂ ಅತಿ ಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಆ ಜನರಿಗಿಂತ ಒಂದರಲ್ಲಿಯಾದರೂ ಕಡಿಮೆಯಾಗಲಿಲ್ಲ.


ನಾನು ಸುಳ್ಳಾಡುವದಿಲ್ಲವೆಂದು ಕರ್ತನಾದ ಯೇಸುವಿನ ತಂದೆಯೂ ನಿರಂತರ ಸ್ತುತಿಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?


ನನ್ನ ಬಾಯಿ ಸತ್ಯವನ್ನೇ ಆಡುವದು, ದುಷ್ಟತನವು ನನ್ನ ತುಟಿಗಳಿಗೆ ಅಸಹ್ಯವಾಗಿದೆ.


ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿ ನಿಜವಾಗದು.


ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು