Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:15 - ಕನ್ನಡ ಸತ್ಯವೇದವು J.V. (BSI)

15 ನೀವು ಹೊರಗಿನ ತೋರಿಕೆಯ ಪ್ರಕಾರ ತೀರ್ಪುಮಾಡುವವರು; ನಾನು ಯಾವನಿಗೂ ತೀರ್ಪುಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ತೀರ್ಪುಕೊಡುವುದು ಲೋಕದ ದೃಷ್ಟಿಯಿಂದ, ನಾನಾದರೋ ಯಾರ ಬಗ್ಗೆಯೂ ತೀರ್ಪುಕೊಡಲು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಹೊರತೋರಿಕೆಯ ಪ್ರಕಾರ ತೀರ್ಪು ಮಾಡುತ್ತಿದ್ದೀರಿ. ಆದರೆ ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ಮಾನವ ರೀತಿಯಲ್ಲಿ ತೀರ್ಪು ಮಾಡುತ್ತೀರಿ. ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮಿ ಮಾನ್ಸಾನಿ ಕರ್‍ಲ್ಯಾ ಸರ್ಕೆ ಇಚಾರ್‍ನಿ ಕರ್‍ತ್ಯಾಶಿ, ಮಿಯಾ ಕೊನಾಚೆಬಿ ಇಚಾರ್‍ನಿ ಕರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:15
17 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ಯಾವನಾದರೂ ನನ್ನ ಮಾತುಗಳನ್ನು ಕೇಳಿದರೂ ಕೈಕೊಂಡು ನಡೆಯದೆ ಹೋದರೆ ನಾನೇ ಅವನಿಗೆ ತೀರ್ಪುಮಾಡುವದಿಲ್ಲ; ಲೋಕಕ್ಕೆ ತೀರ್ಪುಮಾಡುವದಕ್ಕಾಗಿ ನಾನು ಬಂದಿಲ್ಲ; ಲೋಕವನ್ನು ರಕ್ಷಿಸುವದಕ್ಕಾಗಿ ಬಂದಿದ್ದೇನೆ.


ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ.


ಯೇಸು - ನನ್ನ ರಾಜ್ಯವು ಈ ಲೋಕದ್ದಲ್ಲ; ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಯಲ್ಲಿ ಬೀಳದಂತೆ ನನ್ನ ಪರಿವಾರದವರು ಕಾದಾಡುತ್ತಿದ್ದರು; ಆದರೆ ನನ್ನ ರಾಜ್ಯವು ಇಲ್ಲಿಯದಲ್ಲವೆಂದು ಉತ್ತರಕೊಟ್ಟನು.


ದೇವರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನಾದರೂ ವಿಚಾರಿಸಿ ತಿಳಿಕೊಳ್ಳುವದಿಲ್ಲ.


ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ.


ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು.]


ನ್ಯಾಯವನ್ನು ಕಹಿಮಾಡುವವರೇ, ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರೇ,


ನೀವು ನಿಮ್ಮಲ್ಲಿ ಭೇದಮಾಡುವವರಾಗಿ ಅನ್ಯಾಯವಾದ ತೀರ್ಪನ್ನು ಮಾಡುವವರಾದಿರಲ್ಲಾ.


ಆತನು - ಎಲಾ ಮನುಷ್ಯ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇವಿುಸಿದವರಾರು ಎಂದು ಅವನನ್ನು ಕೇಳಿ


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.


ಕುದುರೆಗಳು ಕೋಡುಗಲ್ಲಿನ ಮೇಲೆ ಓಡಾಡುವವೋ; ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷಮಾಡಿ ಧರ್ಮದ ಸುಫಲವನ್ನು ಕಹಿಗೆ ತಂದಿರಲ್ಲಾ.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು