Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:26 - ಕನ್ನಡ ಸತ್ಯವೇದವು J.V. (BSI)

26 ನಿಮ್ಮ ವಿಷಯವಾಗಿ ಮಾತಾಡುವದಕ್ಕೂ ನಿಮ್ಮ ಮೇಲೆ ತೀರ್ಪುಮಾಡುವದಕ್ಕೂ ಅನೇಕ ಸಂಗತಿಗಳು ನನಗುಂಟು; ಆದರೆ ನನ್ನನ್ನು ಕಳುಹಿಸಿಕೊಟ್ಟಾತನು ಸತ್ಯವಂತನು; ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತುಮ್ಚ್ಯಾ ವಿಶಯಾತ್ ಮಿಯಾ ಸಾಂಗ್ತಲೆ, ಅನಿ ತುಮ್ಕಾ ಚುಕಿದಾರ್ ಕರ್‍ತಲೆ ಲೈ ಹಾಯ್. ಜೊ ಕೊನ್ ಮಾಕಾ ಧಾಡುನ್ ದಿಲ್ಯಾನಾಯ್ ತೊ ಖರೆಪಾನಾಚೊ ಮಾನುಸ್, ಅನಿ ಜೆ ಕಾಯ್ ಮಿಯಾ ತೆಚೆಕ್ನಾ ಆಯಿಕ್ಲಾ ತೆಚ್ ಮಿಯಾ ಹ್ಯಾ ಜಗಾಕ್ ಸಾಂಗ್ತಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:26
17 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ನೀವು ಹಾಗೆ ಮಾಡದೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ; ಅಬ್ರಹಾಮನು ಹೀಗೆ ಮಾಡಲಿಲ್ಲ.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ಯೇಸು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ - ನನ್ನನ್ನು ಬಲ್ಲಿರಿ, ನಾನು ಎಲ್ಲಿಯವನೆಂದು ಬಲ್ಲಿರಿ ನಿಜವೇ. ಆದರೂ ನಾನು ನನ್ನಷ್ಟಕ್ಕೆ ಬಂದವನಲ್ಲ, ನನ್ನನ್ನು ಕಳುಹಿಸಿದಾತನು ನಿಜವಾದವನು; ನೀವು ಆತನನ್ನು ಅರಿತವರಲ್ಲ.


ನಂಬಿಗಸ್ತನಾಗಿರುವ ದೇವರಾಣೆ, ನಾವು ನಿಮಗೆ ಹೇಳುವ ಮಾತು ಒಂದು ಸಾರಿ ಹೌದೆಂದು ಒಂದು ಸಾರಿ ಅಲ್ಲವೆಂದು ಇರುವದಿಲ್ಲ.


ನಾನು ನಿಮಗೆ ಹೇಳಬೇಕಾದದ್ದು ಇನ್ನೂ ಬಹಳ ಉಂಟು; ಆದರೆ ಸದ್ಯಕ್ಕೆ ಅದನ್ನು ಹೊರಲಾರಿರಿ.


ಅದಕ್ಕೆ ಯೇಸು - ನಾನು ಹೇಳುವ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದಾತನದು.


ನಿನಗೆ ನಿಜನಿಜವಾಗಿ ಹೇಳುತ್ತೇನೆ, ತಿಳಿದದ್ದನ್ನು ಹೇಳುತ್ತೇವೆ, ನೋಡಿದ್ದಕ್ಕೆ ಸಾಕ್ಷಿಕೊಡುತ್ತೇವೆ; ನೀವು ನಮ್ಮ ಸಾಕ್ಷಿಯನ್ನು ಒಪ್ಪುವದಿಲ್ಲ.


ಆಗ ಅವರು - ನೀನು ಯಾರು? ಅಂದಾಗ ಯೇಸು - ನಾನು ನಿಮಗೆ ಹೇಳಿದಂಥದೇ.


ಆತನು ತಂದೆಯನ್ನು ಸೂಚಿಸಿ ಇದನ್ನು ಹೇಳಿದನೆಂದು ಅವರಿಗೆ ಗೊತ್ತಾಗಲಿಲ್ಲ.


ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು