Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:40 - ಕನ್ನಡ ಸತ್ಯವೇದವು J.V. (BSI)

40 ನೀವು ಹಾಗೆ ಮಾಡದೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ; ಅಬ್ರಹಾಮನು ಹೀಗೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅದಕ್ಕೆ ಬದಲಾಗಿ ದೇವರಿಂದಲೇ ತಿಳಿದ ಸತ್ಯವನ್ನು ನಿಮಗೆ ಹೇಳುತ್ತಿರುವ ನನ್ನನ್ನು ಕೊಲ್ಲಲು ಹವಣಿಸುತ್ತಿದ್ದೀರಿ. ಅಬ್ರಹಾಮನು ಹಾಗೇನೂ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಾನು ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾಗಿದ್ದೇನೆ. ಆದರೆ ನೀವು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದೀರಿ. ಅಬ್ರಹಾಮನು ಅಂಥದ್ದೇನನ್ನೂ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲಲು ಪ್ರಯತ್ನಿಸುತ್ತೀರಿ. ಇಂತಹ ಕ್ರಿಯೆಗಳನ್ನು ಅಬ್ರಹಾಮನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಖರೆ ದೆವಾಕ್ನಾ ಆಯ್ಕಲ್ಲೆ ಖರೆ ತುಮ್ಕಾ ಸಾಂಗುಸಾಟ್ನಿ ಮಿಯಾ ಹೆ ಸಗ್ಳೆ ಕರ್‍ಲೊ, ತರ್ ಬಿ ತುಮಿ ಮಾಕಾ ಜಿವಾನಿ ಮಾರುಕ್ ಬಗುಲ್ಯಾಶಿ. ಅಬ್ರಾಹಾಮ್ ಅಸೊ ನತ್ತೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:40
13 ತಿಳಿವುಗಳ ಹೋಲಿಕೆ  

ನಿಮ್ಮ ವಿಷಯವಾಗಿ ಮಾತಾಡುವದಕ್ಕೂ ನಿಮ್ಮ ಮೇಲೆ ತೀರ್ಪುಮಾಡುವದಕ್ಕೂ ಅನೇಕ ಸಂಗತಿಗಳು ನನಗುಂಟು; ಆದರೆ ನನ್ನನ್ನು ಕಳುಹಿಸಿಕೊಟ್ಟಾತನು ಸತ್ಯವಂತನು; ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.


ಆದರೆ ಪೂರ್ವದಲ್ಲಿ ಸ್ವಾಭಾವಿಕವಾಗಿ ಹುಟ್ಟಿದವನು ದೇವರಾತ್ಮ ಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಅದೆ.


ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವದರಿಂದ ನಿಮಗೆ ಶತ್ರುವಾಗಿದ್ದೇನೋ?


ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟು


ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರಲ್ಲೊಂದು ಭಾಗವನ್ನು ಎಳೆದು ಭೂವಿುಗೆ ಹಾಕಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅಲ್ಲೇ ಕಾದುಕೊಂಡಿತ್ತು.


ಇದಲ್ಲದೆ ಸುನ್ನತಿಯವರಲ್ಲಿ ಯಾರಾರು ಸುನ್ನತಿ ಹೊಂದಿದ್ದಲ್ಲದೆ ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವದಕ್ಕೆ ಮುಂಚೆ ಇದ್ದ ನಂಬಿಕೆಯ ಹೆಜ್ಜೆಗಳನ್ನು ಹಿಡಿದು ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.


ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡೇನೆಂದು ಉಲ್ಲಾಸಪಟ್ಟನು; ಅದನ್ನು ನೋಡಿ ಸಂತೋಷಗೊಂಡನು ಅಂದನು.


ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.


ದುಷ್ಟನು ನೀತಿವಂತನಿಗೆ ವಿರೋಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.


ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರಮಾಡುತ್ತಿದ್ದನು; ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದದರಿಂದ ಆತನಿಗೆ ಯೂದಾಯದಲ್ಲಿ ಸಂಚಾರಮಾಡುವ ಮನಸ್ಸಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು