Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:41 - ಕನ್ನಡ ಸತ್ಯವೇದವು J.V. (BSI)

41 ನೀವು ನಿಮ್ಮ ತಂದೆಯ ಕೃತ್ಯಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು - ನಾವು ಹಾದರಕ್ಕೆ ಹುಟ್ಟಿದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನೀವಾದರೋ ನಿಮಗೆ ತಂದೆಯಾದವನು ಮಾಡಿದಂತೆ ಮಾಡುತ್ತೀರಿ,” ಎಂದರು. ಅದಕ್ಕೆ ಅವರು, “ನಾವೇನು ಹಾದರಕ್ಕೆ ಹುಟ್ಟಿದವರಲ್ಲ, ದೇವರೇ ನಮ್ಮ ತಂದೆ,” ಎಂದು ಪ್ರತಿಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದ್ದರಿಂದ ನಿಮ್ಮ ಸ್ವಂತ ತಂದೆ ಮಾಡಿದ್ದನ್ನೇ ನೀವು ಮಾಡುತ್ತಿದ್ದೀರಿ” ಎಂದು ಹೇಳಿದನು. ಆದರೆ ಯೆಹೂದ್ಯರು, “ನಾವು ಹಾದರಕ್ಕೆ ಹುಟ್ಟಿದವರಲ್ಲ. ದೇವರೇ ನಮ್ಮ ತಂದೆ. ನಮಗಿರುವ ತಂದೆ ಆತನೊಬ್ಬನೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ,” ಎಂದರು. ಅದಕ್ಕವರು, “ನಾವು ಅನೈತಿಕತೆಯಿಂದ ಹುಟ್ಟಿದವರಲ್ಲ. ನಮಗೆ ದೇವರೇ ತಂದೆ,” ಎಂದು ಪ್ರತಿಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತುಮಿ ತುಮ್ಚ್ಯಾ ಬಾಬಾನ್ ಕರಲ್ಲ್ಯಾ ಸರ್ಕೆಚ್ ಕರುಕ್ ಲಾಗ್ಲ್ಯಾಶಿ” ಮಟ್ಲ್ಯಾನ್. ತನ್ನಾ ತೆನಿ ಸಾಂಗಲ್ಲ್ಯಾನ್ ಅಮಿ ವೆಭಿಚಾರಾಕ್ ಜಲ್ಮುಕ್ನಾಂವ್ , “ದೆವ್ ಎಕ್ಲೊಚ್ ಅಮ್ಚೊ ಬಾಬಾ ಹೊವ್ನ್ ಹಾಯ್ ಅನಿ ಅಮಿ ತೆಚಿ ಖರಿ ಪೊರಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:41
17 ತಿಳಿವುಗಳ ಹೋಲಿಕೆ  

ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದೀ; ನಾವು ಜೇಡಿಮಣ್ಣು, ನೀನು ಕುಂಬಾರ, ನಾವೆಲ್ಲರೂ ನಿನ್ನ ಕೈಕೆಲಸವೇ.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನು ಹೇಳುತ್ತೇನೆ; ನೀವೂ ತಂದೆಯಿಂದ ಕೇಳಿದ್ದನ್ನು ಮಾಡಿರಿ ಅಂದನು.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ ಯೆರೂಸಲೇವಿುನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯ ಮಗಳನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.


ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ನಡೆಯಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು [ಜನಾಂಗವನ್ನಾಗಿ] ಮಾಡಿ ಸ್ಥಾಪಿಸಿದನಲ್ಲವೇ.


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.


ಆದಕಾರಣ ನೀನು ಫರೋಹನಿಗೆ - ಇಸ್ರಾಯೇಲ್ ಜನವು ನನಗೆ ಚೊಚ್ಚಲಮಗನಂತೆ ಇದೆ ಎಂದು ತಿಳುಕೋ; ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವದಕ್ಕೆ ಅವನಿಗೆ ಅಪ್ಪಣೆ ಕೊಡಬೇಕು;


ಯೆಹೋವನು ಹೋಶೇಯನ ಸಂಗಡ ಮೊದಲು ಮಾತಾಡಿದಾಗ ಆತನು ಅವನಿಗೆ - ನೀನು ಹೋಗಿ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ; ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡಿಸುತ್ತದೆಂಬದಕ್ಕೆ ಇದು ದೃಷ್ಟಾಂತವಾಗಿರಲಿ ಎಂದು ಹೇಳಿದನು.


ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು