Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:42 - ಕನ್ನಡ ಸತ್ಯವೇದವು J.V. (BSI)

42 ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೇಸು ಆ ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಜೆಜುನ್ ತೆಂಕಾ, “ಖರೆಚ್! ದೆವ್ ತುಮ್ಚೊ ಬಾಬಾ ಹೊಲ್ಯಾರ್ ತುಮಿ ಮಾಜೊ ಪ್ರೆಮ್ ಕರಿ ಹೊತ್ತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ಮಿಯಾ ದೆವಾತ್ನಾಚ್ ಯೆಲಾ ಅನಿ ಅತ್ತಾ ಹಿತ್ತೆ ಹಾಂವ್. ಮಿಯಾ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಯೆವ್ಕ್ ನಾ, ತೆನಿಚ್ ಮಾಕಾ ಧಾಡುನ್ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:42
22 ತಿಳಿವುಗಳ ಹೋಲಿಕೆ  

ಯಾಕಂದರೆ ನನ್ನಷ್ಟಕ್ಕೆ ನಾನೇ ಮಾತಾಡಿದವನಲ್ಲ; ನನ್ನನ್ನು ಕಳುಹಿಸಿಕೊಟ್ಟ ತಂದೆಯೇ - ನೀನು ಇಂಥಿಂಥದನ್ನು ಹೇಳಬೇಕು, ಹೀಗೆ ಹೀಗೆ ಮಾತಾಡಬೇಕು ಎಂಬದಾಗಿ ನನಗೆ ಆಜ್ಞೆಕೊಟ್ಟಿದ್ದಾನೆ.


ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ನೀತಿಸ್ವರೂಪನಾದ ತಂದೆಯೇ, ಲೋಕವಂತೂ ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ; ಮತ್ತು ಇವರು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ತಿಳುಕೊಂಡಿದ್ದಾರೆ.


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ.


ಎಲ್ಲರು ತನಗೆ ಮಾನ ಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತಂದೆಯು ಇಚ್ಫೈಸುತ್ತಾನೆ. ಮಗನಿಗೆ ಮಾನಕೊಡದವನು ಅವನನ್ನು ಕಳುಹಿಸಿದ ತಂದೆಗೂ ಮಾನಕೊಡದವನಾಗಿದ್ದಾನೆ.


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಯೇಸು ಅವರಿಗೆ - ನಾನು ಎಲ್ಲಿಂದ ಬಂದವನಾಗಿಯೂ ಎಲ್ಲಿಗೆ ಹೋಗುವವನಾಗಿಯೂ ಇದ್ದೇನೆಂಬದು ನನಗೆ ಗೊತ್ತಿರುವದರಿಂದ ನನ್ನ ವಿಷಯವಾಗಿ ನಾನೇ ಸಾಕ್ಷಿಹೇಳಿಕೊಂಡರೂ ನನ್ನ ಸಾಕ್ಷಿ ನಿಜವಾಗಿರುವದು. ನೀವಾದರೋ ನಾನು ಎಲ್ಲಿಂದ ಬಂದವನು, ಎಲ್ಲಿಗೆ ಹೋಗುವವನು ಎಂಬದನ್ನು ತಿಳಿಯದವರು.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು