Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:43 - ಕನ್ನಡ ಸತ್ಯವೇದವು J.V. (BSI)

43 ನೀವು ನನ್ನ ಮಾತನ್ನು ಗ್ರಹಿಸದೆ ಇರುವದಕ್ಕೆ ಕಾರಣವೇನು? ನನ್ನ ಬೋಧನೆಗೆ ಕಿವಿಗೊಡಲಾರದೆ ಇರುವದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಾನು ಹೇಳುವ ಈ ಸಂಗತಿಗಳನ್ನು ನೀವು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ನನ್ನ ಉಪದೇಶವನ್ನು ನೀವು ಸ್ವೀಕರಿಸಿಕೊಳ್ಳಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಮಿಯಾ ಕಾಯ್ ಸಾಂಗ್ತಾ ತೆ ತುಮ್ಕಾ ಕಶ್ಯಾಕ್ ಕಳಿನಾ? ಕಶ್ಯಾಕ್ ಮಟ್ಲ್ಯಾರ್ ತುಮ್ಕಾ ಮಿಯಾ ಸಾಂಗ್ತಲಿ ಖಬರ್ ಆಯ್ಕುನ್ ಸೊಸುನ್ ಘೆವ್ಕ್ ಹೊಯ್ನಾ ಹೊಲಾ ಕಾಯ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:43
18 ತಿಳಿವುಗಳ ಹೋಲಿಕೆ  

ನಾನು ನನ್ನ ತಂದೆಯ ಹೆಸರಿನ ಮೇಲೆ ಬಂದಿದ್ದೇನೆ; ನನ್ನನ್ನು ನೀವು ಒಪ್ಪಿಕೊಳ್ಳುವದಿಲ್ಲ; ಮತ್ತೊಬ್ಬನು ಸ್ವಂತ ಹೆಸರಿನ ಮೇಲೆ ಬಂದರೆ ಅವನನ್ನು ಒಪ್ಪಿಕೊಳ್ಳುವಿರಿ.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ - ಇದು ಕಠಿನವಾದ ಮಾತು, ಇದನ್ನು ಯಾರು ಕೇಳಾರು? ಅಂದುಕೊಂಡರು.


ಆತನು ತಂದೆಯನ್ನು ಸೂಚಿಸಿ ಇದನ್ನು ಹೇಳಿದನೆಂದು ಅವರಿಗೆ ಗೊತ್ತಾಗಲಿಲ್ಲ.


[ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ಕೆಟ್ಟವರು ನ್ಯಾಯವನ್ನು ಗ್ರಹಿಸರು; ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.


ಅದಕ್ಕೆ ಆತನು - ನೀನು ಈ ಜನರ ಬಳಿಗೆ ಹೋಗಿ - ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,


ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಿಲ್ಲ; ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.


ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.


ಅದಕ್ಕವರು - ನಾವು ಅಬ್ರಹಾಮನ ಸಂತಾನದವರು; ನಾವು ಯಾರಿಗೂ ಎಂದೂ ದಾಸರಾಗಿಲ್ಲ; ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಳುವದು ಹೇಗೆ? ಅಂದರು.


ಅದಕ್ಕವರು - ನಮ್ಮ ತಂದೆಯು ಅಬ್ರಹಾಮನೇ ಅಂದಾಗ ಯೇಸು ಅವರಿಗೆ - ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು