Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:44 - ಕನ್ನಡ ಸತ್ಯವೇದವು J.V. (BSI)

44 ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:44
41 ತಿಳಿವುಗಳ ಹೋಲಿಕೆ  

ಎಲೋ, ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕುಮಾಡುವದನ್ನು ಬಿಡುವದಿಲ್ಲವೋ?


ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನು ಹೇಳುತ್ತೇನೆ; ನೀವೂ ತಂದೆಯಿಂದ ಕೇಳಿದ್ದನ್ನು ಮಾಡಿರಿ ಅಂದನು.


ನೀವು ನಿಮ್ಮ ತಂದೆಯ ಕೃತ್ಯಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು - ನಾವು ಹಾದರಕ್ಕೆ ಹುಟ್ಟಿದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.


ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ, ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.


ಹೊಲವಂದರೆ ಈ ಲೋಕ; ಒಳ್ಳೆಯ ಬೀಜವಂದರೆ ಪರಲೋಕ ರಾಜ್ಯದವರು; ಹಣಜಿ ಅಂದರೆ ಸೈತಾನನವರು;


ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದೆ ನಡೆಯುವವನು ಸುಳ್ಳುಗಾರನಾಗಿದ್ದಾನೆ; ಸತ್ಯವೆಂಬದು ಅವನಲ್ಲಿ ಇಲ್ಲ.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಅಧೋಲೋಕದ ಅಧಿಕಾರಿಯಾದ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?


ಸೈತಾನನು ಇಸ್ರಾಯೇಲ್ಯರಿಗೆ ವಿರೋಧವಾಗಿ ಎದ್ದು ಖಾನೇಷುಮಾರಿಮಾಡುವದಕ್ಕೆ ದಾವೀದನನ್ನು ಪ್ರೇರಿಸಿದನು.


ಅದಕ್ಕೆ ಯೇಸು - ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೋ? ನಿಮ್ಮಲ್ಲಿಯೂ ಒಬ್ಬನು ಸೈತಾನನ ಮಗನಾಗಿದ್ದಾನೆ ಅಂದನು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಆದರೆ ನಿನ್ನ ಕೈನೀಡಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ಹೇಗೆ ಪ್ರೇರಿಸುವಿ ಎಂದು ಯೆಹೋವನು ಕೇಳಲು ಅದು - ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.


ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.


ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ನಾನಂತು ಆತನನ್ನು ಬಲ್ಲೆನು; ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು; ಆದರೆ ಆತನನ್ನು ತಿಳಿದಿದ್ದೇನೆ, ಆತನ ವಾಕ್ಯವನ್ನು ಕೈಕೊಂಡು ನಡೆಯುತ್ತೇನೆ.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಮತ್ತು ಸತ್ಯವೆಂಬದು ನಮ್ಮಲ್ಲಿಲ್ಲ.


ನೀವು ಸತ್ಯವನ್ನು ತಿಳಿಯದವರೆಂಬ ಭಾವನೆಯಿಂದಲ್ಲ, ನೀವು ಅದನ್ನು ತಿಳಿದಿರುವದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವದಿಲ್ಲವೆಂಬದನ್ನು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.


ಆಗ ಯೆಹೂದ್ಯರು ಈ ಸಂಗತಿಗಳು ನಿಜವೇ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವದರಲ್ಲಿ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು