Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:54 - ಕನ್ನಡ ಸತ್ಯವೇದವು J.V. (BSI)

54 ಯೇಸು - ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆ ಹುರುಳಿಲ್ಲದ್ದು; ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ. ನೀವು ಆತನನ್ನು ನಮ್ಮ ದೇವರು ಅನ್ನುತ್ತೀರಿ; ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ, ಆ ಮಹಿಮೆಗೆ ಯಾವ ಬೆಲೆಯೂ ಇಲ್ಲ. ನನ್ನ ತಂದೆಯೇ ನನ್ನನ್ನು ಮಹಿಮೆಪಡಿಸುವನು. ನೀವು ಆತನನ್ನೇ ನಿಮ್ಮ ದೇವರೆಂದು ಹೇಳಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನೀವು ಯಾರನ್ನು, ‘ಅವರೇ ನಮ್ಮ ದೇವರು’ ಎಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಮಹಿಮೆ ಪಡಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ತನ್ನಾ ಜೆಜುನ್, “ಮಿಯಾ ಮಾಕಾಚ್ ಮರ್‍ಯಾದ್ ಗಾವುಚಿ ಮನುನ್ ಬಗುಲಾ ಹೊಲ್ಯಾರ್, ತ್ಯಾ ಮರ್‍ಯಾದಿಕ್ ಕಾಯ್ಬಿ ಕಿಮ್ಮತ್ ನಾ. ಮಾಜೊ ಬಾಬಾಚ್ ಮಾಕಾ ಮರ್‍ಯಾದ್ ಗಾವಿ ಸರ್ಕೆ ಕರ್‍ತಾ ತೆಕಾ ತುಮಿ ತುಮ್ಚೊ ದೆವ್ ಮನುನ್ ಮನ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:54
28 ತಿಳಿವುಗಳ ಹೋಲಿಕೆ  

ನನಗೆ ಮಾನಬರಬೇಕೆಂದು ನಾನು ಅಪೇಕ್ಷಿಸುವದಿಲ್ಲ; ನನಗೆ ಮಾನಬರಬೇಕೆಂದು ಅಪೇಕ್ಷಿಸುವವನು ಒಬ್ಬನಿದ್ದಾನೆ; ಆತನೇ ನ್ಯಾಯತೀರಿಸುವನು.


ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವದು ಮಾನವಲ್ಲ.


ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ಮೆಚ್ಚಿದ್ದೇನೆ ಎಂಬಂಥ ವಾಣಿಯು ಸರ್ವೋತ್ಕೃಷ್ಟಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಘನಮಾನಗಳನ್ನು ಹೊಂದಿದನಲ್ಲವೇ.


ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ನೀವು ನಿಮ್ಮ ತಂದೆಯ ಕೃತ್ಯಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು - ನಾವು ಹಾದರಕ್ಕೆ ಹುಟ್ಟಿದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.


ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.


ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.


ನಾನು ಮನುಷ್ಯರಿಂದಾಗುವ ಮಾನವನ್ನು ಅಂಗೀಕರಿಸುವದಿಲ್ಲ.


ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಆಗ ಯೆಹೋವನು - ಈ ಮಗುವಿಗೆ ಲೋ ಅಮ್ಮಿ ಎಂಬ ಹೆಸರಿಡು; ಏಕಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ ಅಂದನು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು