Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:58 - ಕನ್ನಡ ಸತ್ಯವೇದವು J.V. (BSI)

58 ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ತನ್ನಾ ಜೆಜುನ್, “ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಅಬ್ರಾಹಾಮ್ ಉಪ್ಜುಚ್ಯಾ ಪಯ್ಲೆಚ್ಯಾನುಚ್ ಮಿಯಾ ಹಾಂವ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:58
24 ತಿಳಿವುಗಳ ಹೋಲಿಕೆ  

ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು.


ಆತನು ಎಲ್ಲಕ್ಕೂ ಮೊದಲು ಇದ್ದವನು; ಆತನು ಸಮಸ್ತಕ್ಕೂ ಆಧಾರ ಭೂತನು.


ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.


ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.


ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ನಾನೇ ಪರಮಾತ್ಮನು; ನಾನೇ ಆದಿ, ಅಂತವೂ ನಾನೇ.


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಹೌದು, ಇಂದಿನಿಂದ ನಾನೇ ಪರಮಾತ್ಮನು; ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಯಾರು ಅಡ್ಡಬಂದಾರು? ಎಂಬದೇ ಯೆಹೋವನ ಮಾತು.


ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.


ಹೆದರಬೇಡಿರಿ, ಅಂಜದಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯವನ್ನು ಕೈಕೊಂಡು ನಡೆದರೆ ಅವನು ಎಂದಿಗೂ ಸಾವನ್ನು ಕಾಣುವದಿಲ್ಲ ಅಂದನು.


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಅದಕ್ಕೆ ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.


ಅದಕ್ಕೆ ಯೇಸು - ನಿಮಗೆ ಹೇಳಿದೆನು, ಆದರೆ ನೀವು ನಂಬದೆ ಇದ್ದೀರಿ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನಗೆ ಸಾಕ್ಷಿಯಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು