Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:6 - ಕನ್ನಡ ಸತ್ಯವೇದವು J.V. (BSI)

6 ಆತನ ಮೇಲೆ ತಪ್ಪುಹೊರಿಸುವದಕ್ಕೆ ಏನಾದರೂ ಒಂದು ನಿವಿುತ್ತ ಬೇಕಾಗಿದ್ದದರಿಂದ ಈತನು ಏನನ್ನುತ್ತಾನೋ ನೋಡೋಣ ಎಂದು ಹಾಗೆ ಕೇಳಿದರು. ಆದರೆ ಯೇಸು ಬೊಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿದರೆ ಆತನ ಮೇಲೆ ಅಪವಾದ ಹೊರಿಸಲು ಸಾಧ್ಯವಾಗುತ್ತದೆ ಎಂದು ಈ ಪ್ರಶ್ನೆಯನ್ನು ಕೇಳಿದರು. ಆದರೆ ಯೇಸು ತಲೆ ಬಾಗಿಸಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆಯತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆಜುಕ್ ಗೊಂದ್ಳುನ್ ಘಾಲುನ್ ಹೆಚ್ಯಾವೈನಾ ತೆಕಾ ಶಿರ್ಕುನ್ ಘಾಲುಕ್ ಮನುನ್ ಅಶೆಚ್ ಮಟ್ಲ್ಯಾನಿ. ಖರೆ ತೊ ಖಾಲ್ತಿ ವ್ಹಾಕ್ಲೊ ಅನಿ ತ್ಯೆಚ್ಯಾ ಬೊಟಾನಿ ಜಿಮ್ನಿ ವರ್ತಿ ಲಿವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:6
27 ತಿಳಿವುಗಳ ಹೋಲಿಕೆ  

ಯೆಹೋವನೇ, ಇಸ್ರಾಯೇಲ್ಯರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು; ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ದೂಳಿನಲ್ಲಿ ಬರೆಯಲ್ಪಡುವದು.


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು


ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಯಾವದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದ್ದಕ್ಕೆ


ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥವಾದಿಯನ್ನು ದ್ವೇಷಿಸುತ್ತೀರಿ.


ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತಾಡುವ ಸಮಯ, ಪ್ರೀತಿಸುವ ಸಮಯ,


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು; ನಾವು ಪರೀಕ್ಷಿಸದೆ ಇರೋಣ.


ಆಗ ಫರಿಸಾಯರು ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದರು.


ತರುವಾಯ ಫರಿಸಾಯರು ಹೊರಟು ಬಂದು ಆತನ ಕೂಡ ತರ್ಕಮಾಡುತ್ತಾ ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳುತ್ತಿರಲು ಆತನು ತನ್ನ ಆತ್ಮದಲ್ಲಿ ನೊಂದು ನಿಟ್ಟುಸುರುಬಿಟ್ಟು -


ಆಗ ಮಹಾಯಾಜಕನು - ನಿನಗೆ ಜೀವಸ್ವರೂಪನಾದ ದೇವರ ಆಣೆಯನ್ನು ಇಡುತ್ತೇನೆ; ನೀನು ದೇವಕುಮಾರನಾದ ಕ್ರಿಸ್ತನು ಹೌದೋ ಅಲ್ಲವೋ ಎಂಬದನ್ನು ನಮಗೆ ಹೇಳಬೇಕು ಎಂದು ಅನ್ನಲಾಗಿ ಯೇಸು -


ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆಮಾಡಬೇಕೆಂದು -


ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ - ಕಪಟಿಗಳೇ, ನನ್ನನ್ನು ಯಾಕೆ ಪರೀಕ್ಷೆಮಾಡುತ್ತೀರಿ?


ತರುವಾಯ ಫರಿಸಾಯರೂ ಸದ್ದುಕಾಯರೂ ಬಂದು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳಿದರು. ಆತನು ಅವರಿಗೆ -


ಆದರೆ ಆತನು ಆಕೆಗೆ ಏನೂ ಉತ್ತರಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು - ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ; ಆಕೆಯನ್ನು ಕಳುಹಿಸಿಬಿಡು ಎಂದು ಆತನನ್ನು ಬೇಡಿಕೊಂಡರು.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು; ಇದು ದುಷ್ಕಾಲವೇ ಸರಿ.


ಆಗಲೇ ಒಬ್ಬನ ಕೈಯ ಬೆರಳುಗಳು ಬಂದು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರಹ ಬರೆದವು; ಬರೆಯುತ್ತಿದ್ದ ಹಸ್ತವನ್ನು ರಾಜನು ನೋಡಿದನು.


ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವದು ನಾಯಿಯನ್ನು ಕಿವಿಹಿಡಿದ ಹಾಗೆ.


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ಯೆಹೂದನು ಪ್ರಾಯದ ಸಿಂಹದಂತಿದ್ದಾನೆ; ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲಿದ್ದೀ. ಅವನು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದ್ದಾನೆ; ಮೃಗೇಂದ್ರನಿಗೆ ಸಮಾನನಾದ ಇವನನ್ನು ಕೆಣಕುವದು ಯಾರಿಂದಾದೀತು?


ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಜನರೆಲ್ಲರು ಆತನ ಬಳಿಗೆ ಬಂದರು;


ಬೇರೆ ಕೆಲವರು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕು ಎಂದು ಕೇಳಿದರು.


ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು.


ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು; ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕುಕ್ಕೆಹಾಕಿಕೊಂಡಿರುವೆನು ಅಂದುಕೊಂಡೆನು.


ಅವರು ಆತನ ಮೇಲೆ ತಪ್ಪುಹೊರಿಸಬೇಕೆಂದು ಆಲೋಚಿಸಿ ಸಬ್ಬತ್‍ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು