Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:16 - ಕನ್ನಡ ಸತ್ಯವೇದವು J.V. (BSI)

16 ಆ ಫರಿಸಾಯರಲ್ಲಿ ಕೆಲವರು - ಈ ಮನುಷ್ಯನು ದೇವರಿಂದ ಬಂದವನಲ್ಲ; ಅವನು ಸಬ್ಬತ್‍ದಿವಸವನ್ನು ಲಕ್ಷ್ಯಮಾಡುವದಿಲ್ಲವಲ್ಲಾ ಅಂದರು. ಇನ್ನು ಕೆಲವರು - ಇಂಥ ಮಹತ್ತುಗಳನ್ನು ಮಾಡುವದು ಭಕ್ತಿಹೀನನ ಕೈಯಿಂದ ಹೇಗಾದೀತು? ಅಂದರು. ಹೀಗೆ ಅವರಲ್ಲಿ ಭೇದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ಉಲ್ಲಿ ಫಾರಿಜೆವಾನಿ " ಹೆ ಕರಲ್ಲೊ ಮಾನುಸ್ ದೆವಾಕ್ ನಾ ಯೆಲ್ಲೊ ನ್ಹಯ್," ತೊ ಸಬ್ಬಾತಾಚೊ ಖಾಯ್ದೊಚ್ ಪಾಳಿನಾ, ಮಟ್ಲ್ಯಾನಿ. ಖರೆ ಅನಿ ಉಲ್ಲ್ಯಾನಿ " ಎಕ್ ಪಾಪಿ ಮಾನ್ಸಾನ್ ಎವ್ಡೆ ಮೊಟೆ ಅಜಾಪ್ ಕಶೆ ಕರುಕ್ ಹೊತಾ?" ಮಟ್ಲ್ಯಾನಿ, ಅಶೆ ತೆಂಚ್ಯಾ- ತೆಂಚ್ಯಾ ಮದ್ದಿಚ್ ವಾದ್‍ವಿವಾದ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:16
18 ತಿಳಿವುಗಳ ಹೋಲಿಕೆ  

ಈ ಮಾತುಗಳ ದೆಸೆಯಿಂದ ಯೆಹೂದ್ಯರಲ್ಲಿ ತಿರಿಗಿ ಭೇದವಾಯಿತು.


ಹೀಗೆ ಜನರಲ್ಲಿ ಆತನನ್ನು ಕುರಿತು ಭೇದ ಉಂಟಾಯಿತು.


ಮತ್ತು ಜನರ ಗುಂಪುಗಳಲ್ಲಿ ಆತನ ವಿಷಯವಾಗಿ ಬಹಳ ಗುಜುಗುಜು ಮಾತು ನಡೆಯುತ್ತಿತ್ತು. ಕೆಲವರು - ಆತನು ಒಳ್ಳೆಯವನು ಅಂದರು; ಇನ್ನು ಕೆಲವರು - ಅಲ್ಲ, ಜನರನ್ನು ತಪ್ಪಾದ ಮಾರ್ಗಕ್ಕೆ ಎಳೆಯುತ್ತಾನೆ ಅಂದರು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ಫರಿಸಾಯರು ಅದನ್ನು ಕಂಡು - ನೋಡು, ನಿನ್ನ ಶಿಷ್ಯರು ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ ಎಂದು ಆತನಿಗೆ ಹೇಳಿದರು.


ಮತ್ತಾರೂ ನಡಿಸದ ಕ್ರಿಯೆಗಳನ್ನು ನಾನು ಅವರಲ್ಲಿ ನಡಿಸದೆ ಇದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರು ನೋಡಿದ್ದಾರೆ, ಆದರೂ ನನ್ನ ಮೇಲೆಯೂ ನನ್ನ ತಂದೆಯ ಮೇಲೆಯೂ ದ್ವೇಷಮಾಡಿದ್ದಾರೆ.


ನಾನು ತಂದೆಯಲ್ಲಿ ಇದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆಂಬುವ ನನ್ನ ಮಾತನ್ನು ನಂಬಿರಿ; ಇಲ್ಲದಿದ್ದರೆ ಆ ಕ್ರಿಯೆಗಳನ್ನೇ ನೋಡಿ ನನ್ನ ಮಾತನ್ನು ನಂಬಿರಿ.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು


ಆಗ ಯೆಹೂದ್ಯರು - ಇವನು ತನ್ನ ಮಾಂಸವನ್ನು ನಮಗೆ ಹೇಗೆ ತಿನ್ನುವದಕ್ಕೆ ಕೊಟ್ಟಾನು ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡುತ್ತಿರಲು


ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.


ಆಗ ಆ ಊರಿನ ಜನರಲ್ಲಿ ಭೇದವುಂಟಾಯಿತು; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.


ಆಗ ಅವರು ಆತನ ಮೇಲೆ ತಪ್ಪುಹೊರಿಸಬೇಕೆಂದು ಆತನನ್ನು - ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ಸರಿಯೋ ಎಂದು ಕೇಳಿದರು.


ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು.


ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಆದರೆ ಆ ದಿವಸ ಸಬ್ಬತ್‍ದಿನವಾಗಿತ್ತು; ಹೀಗಿರುವದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ - ಈ ಹೊತ್ತು ಸಬ್ಬತ್‍ದಿನವಾಗಿದೆ; ನೀನು ಹಾಸಿಗೆಯನ್ನು ಹೊರುವದು ಸರಿಯಲ್ಲವೆಂದು ಹೇಳಿದ್ದಕ್ಕೆ


ಮೋಶೆಯ ನೇಮವನ್ನು ಮೀರಬಾರದೆಂದು ಒಬ್ಬನು ಸಬ್ಬತ್‍ದಿನದಲ್ಲಿ ಸುನ್ನತಿಮಾಡಿಸಿಕೊಳ್ಳುವದಾದರೆ ನಾನು ಸಬ್ಬತ್‍ದಿನದಲ್ಲಿ ಒಬ್ಬ ಮನುಷ್ಯನನ್ನು ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ಕೋಪಗೊಳ್ಳುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು