Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:17 - ಕನ್ನಡ ಸತ್ಯವೇದವು J.V. (BSI)

17 ಹೀಗಿರಲಾಗಿ ಅವರು ತಿರಿಗಿ ಆ ಕುರುಡನನ್ನು - ಅವನು ನಿನಗೆ ಕಣ್ಣುಕೊಟ್ಟದ್ದರಿಂದ ನೀನು ಅವನ ವಿಷಯವಾಗಿ ಏನು ಹೇಳುತ್ತೀ ಎಂದು ಕೇಳಿದಾಗ ಅವನು - ಆತನು ಪ್ರವಾದಿ ಅನ್ನುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದ್ದರಿಂದ ಫರಿಸಾಯರು ಆ ಕುರುಡನನ್ನು ಕುರಿತು, “ಅವನೇ ನಿನಗೆ ಕಣ್ಣುಕೊಟ್ಟನೆಂದು ಹೇಳುತ್ತೀಯಲ್ಲಾ. ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ವಿಚಾರಿಸಿದರು. ಅದಕ್ಕೆ ಅವನು, “ಅವರೊಬ್ಬ ಪ್ರವಾದಿಯೇ ಸರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು. ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ತಿರುಗಿ, “ಆತನು ನಿನಗೆ ದೃಷ್ಟಿಕೊಟ್ಟದ್ದರಿಂದ ಆತನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದಾಗ, ಅವನು, “ಅವರು ಒಬ್ಬ ಪ್ರವಾದಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆ ಮನುನ್ ಫಾರಿಜೆವಾನಿ ಅನಿ ಎಗ್ದಾ ತ್ಯಾ ಮಾನ್ಸಾಕ್ ಇಚಾರ್‍ಲ್ಯಾನಿ, “ತೆನಿ ತುಕಾ ಡೊಳ್ಯಾಕ್ ದಿಸ್ಟ್ ದಿಲ್ಲ್ಯಾ ಮಾನ್ಸಾಚ್ಯಾ ವಿಶಯಾತ್ ಕಾಯ್ ಮನ್ತೆಯ್?” ಮನುನ್ ಇಚಾರ್‍ಲ್ಯಾನಿ. ತನ್ನಾ ತ್ಯಾ ಮಾನ್ಸಾನ್ “ತೊ ಎಕ್ ಪ್ರವಾದಿ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:17
9 ತಿಳಿವುಗಳ ಹೋಲಿಕೆ  

ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ - ಲೋಕಕ್ಕೆ ಬರಬೇಕಾದ ಪ್ರವಾದಿ ಈತನೇ ನಿಜ ಎಂದು ಹೇಳಿಕೊಂಡರು.


ಆ ಹೆಂಗಸು ಆತನಿಗೆ - ಅಯ್ಯಾ, ನೀನು ಪ್ರವಾದಿಯೆಂದು ನನಗೆ ಕಾಣುತ್ತದೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.


ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು (ನಿಮಗೆ) ಏರ್ಪಡಿಸುವನು; ಅವನಿಗೇ ನೀವು ಕಿವಿಗೊಡಬೇಕು.


ಆದಕಾರಣ ಈ ಫರಿಸಾಯರು ಸಹ ಅವನನ್ನು ವಿಚಾರಿಸಿ - ನಿನಗೆ ಹೇಗೆ ಕಣ್ಣು ಬಂದವು ಎಂದು ಕೇಳಿದರು. ಅವನು ಅವರಿಗೆ - ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳಕೊಂಡೆನು, ಕಣ್ಣು ಕಾಣುತ್ತವೆ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು