Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:27 - ಕನ್ನಡ ಸತ್ಯವೇದವು J.V. (BSI)

27 ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ; ಯಾಕೆ ತಿರಿಗಿ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸದೆಯೋ? ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು, “ನಿಮಗೆ ಆಗಲೇ ಹೇಳಿದ್ದೇನೆ. ಆದರೆ ನೀವು ನಂಬುವುದಿಲ್ಲ. ಅದನ್ನೇ ಏಕೆ ಮತ್ತೆ ಮತ್ತೆ ಕೇಳುತ್ತೀರಿ? ಅವನ ಶಿಷ್ಯರಾಗಲು ನಿಮಗೂ ಮನಸ್ಸಿದೆಯೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಮನುಷ್ಯನು, “ಆಗಲೇ ನಿಮಗೆ ಅದನ್ನು ತಿಳಿಸಿದ್ದೇನೆ. ಆದರೆ ನೀವು ನನಗೆ ಕಿವಿಗೊಡಲಿಲ್ಲ. ಈಗ ಅದನ್ನು ಮತ್ತೆ ಏಕೆ ಕೇಳಬೇಕೆಂದಿದ್ದೀರಿ? ನೀವು ಸಹ ಆತನ ಹಿಂಬಾಲಕರಾಗಬೇಕೆಂದಿದ್ದೀರೋ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಉತ್ತರವಾಗಿ, “ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ. ಆದರೆ ನೀವು ಕೇಳಲಿಲ್ಲ, ನೀವು ತಿರುಗಿ ಏಕೆ ಕೇಳುತ್ತೀರಿ? ನೀವು ಸಹ ಅವರ ಶಿಷ್ಯರಾಗುವುದಕ್ಕೆ ಬಯಸುತ್ತೀರೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ತ್ಯಾ ಮಾನ್ಸಾನ್ “ಮಿಯಾ ತುಮ್ಕಾ ಸಗ್ಳೆ ಸಾಂಗ್ಲಾ, ತುಮಿ ಆಯ್ಕುಕ್‍ನ್ಯಾಸಿ ಕಾಯ್? ಅನಿ ಪರ್ತುನ್ ಕಶ್ಯಾಕ್ ಅಯ್ಕುಕ್ ಪಾಜೆ ತುಮ್ಕಾ? ತುಮ್ಕಾಬಿ ತೆಚಿ ಶಿಸಾ ಹೊತಲೊ ಮನ್ ಹಾಯ್ ಕಾಯ್?” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:27
4 ತಿಳಿವುಗಳ ಹೋಲಿಕೆ  

ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು ಅಂದರು. ಆತನು ಅವರಿಗೆ - ನಾನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ,


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.


ಅವರು ಅವನನ್ನು - ನಿನಗೆ ಏನು ಮಾಡಿದನು? ನಿನಗೆ ಹೇಗೆ ಕಣ್ಣುಕೊಟ್ಟನು ಎಂದು ಕೇಳಿದ್ದಕ್ಕೆ ಅವನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು