ಯೋಹಾನ 9:39 - ಕನ್ನಡ ಸತ್ಯವೇದವು J.V. (BSI)39 ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತನ್ನಾ ಜೆಜುನ್, “ಮಿಯಾ ನ್ಯಾಯ್ ನಿರ್‍ನಯ್ ಕರುಕ್ ಮನುನ್ ಹ್ಯಾ ಜಗಾತ್ ಯೆಲಾ, ತೆಚೆಸಾಟ್ನಿ ಕುಡ್ಡ್ಯಾನಿ ಬಗುಕ್ ಪಾಜೆ ಅನಿ ಜೆ ಕೊನಾಕ್ ದಿಸ್ತಾ ತೆನಿ ಕುಡ್ಡೆ ಹೊವ್ಕ್ ಪಾಜೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |