Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:4 - ಕನ್ನಡ ಸತ್ಯವೇದವು J.V. (BSI)

4 ನನ್ನನ್ನು ಕಳುಹಿಸಿದಾತನ ಕಾರ್ಯಗಳನ್ನು ನಾವು ಹಗಲಿರುವಾಗಲೇ ನಡಿಸಬೇಕು. ರಾತ್ರಿ ಬರುತ್ತದೆ, ಅದು ಬಂದ ಮೇಲೆ ಯಾರೂ ಕೆಲಸ ಮಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ದಿಸ್ ಬುಡಿ ಪತರ್ ಮಾಕಾ ಧಾಡಲ್ಲ್ಯಾನ್ ಕರುಕ್ ಸಾಂಗಲ್ಲಿ ಕಾಮಾ ಅಮಿ ಕರುಕ್ ಪಾಜೆ ರಾತ್ ಹೊವ್ಕ್ ಯೆಲಿ ರಾತ್ ಹೊಲಿ ತರ್ ಕೊನ್ಬಿ ಕಾಮ್ ಕರಿನಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:4
18 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ಈ ದಿನಗಳು ಕೆಟ್ಟವುಗಳಾಗಿವೆ; ಆದದರಿಂದ ಕಾಲವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿಕೊಳ್ಳಿರಿ.


ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.


ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.


ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.


ಯೇಸು ಅವರನ್ನು - ತಂದೆಯ ಕಡೆಯಿಂದ ಅನೇಕ ಒಳ್ಳೇ ಕ್ರಿಯೆಗಳನ್ನು ನಿಮಗೆ ತೋರಿಸಿದೆನು; ಅವುಗಳಲ್ಲಿ ಯಾವ ಕ್ರಿಯೆಯ ದೆಸೆಯಿಂದ ನನ್ನ ಮೇಲೆ ಕಲ್ಲೆಸೆಯುತ್ತೀರಿ ಎಂದು ಕೇಳಿದ್ದಕ್ಕೆ


ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನ ಮಾತನ್ನು ನಂಬಬೇಡಿರಿ;


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.


ಅದಕ್ಕೆ ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡು ಮಗನು ಮಾಡುತ್ತಾನೆ ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುತ್ತಾನೆ.


ಆಗ ಯೇಸು - ಇನ್ನು ಸ್ವಲ್ಪಕಾಲ ನಾನು ನಿಮ್ಮಲ್ಲಿ ಇದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.


ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು.


ಆತನು ಕೈಬತ್ತಿದ್ದವನಿಗೆ - ಎದ್ದು ನಡುವೆ ಬಾ ಎಂದು ಹೇಳಿ ಅವರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು