Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:8 - ಕನ್ನಡ ಸತ್ಯವೇದವು J.V. (BSI)

8 ಆಗ ನೆರೆಹೊರೆಯವರೂ ಅವನು ಭಿಕ್ಷಗಾರನಾಗಿದ್ದದ್ದನ್ನು ಮೊದಲು ನೋಡಿದವರೂ - ಇವನು ಕೂತಿದ್ದ ಆ ಭಿಕ್ಷುಕನಲ್ಲವೇ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನ ನೆರೆಯವರು ಮತ್ತು ಹಿಂದೆ ಅವನು ಭಿಕ್ಷೆಬೇಡುತ್ತಿದ್ದಾಗ ಅವನನ್ನು ನೋಡಿದ್ದವರು, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೆ?” ಎಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಮನುಷ್ಯನು ಮೊದಲು ಭಿಕ್ಷೆ ಬೇಡುತ್ತಿದ್ದುದನ್ನು ನೋಡಿದ್ದ ಕೆಲವರು ಮತ್ತು ಅವನ ನೆರೆಯವರು, “ನೋಡಿ! ಯಾವಾಗಲೂ ಭಿಕ್ಷೆ ಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ” ಎಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ನೆರೆಯವರು ಮತ್ತು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ಕಂಡವರು, “ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆಚ್ಯಾ ಅಜು ಬಾಜುಚ್ಯಾನಿ ಅನಿ ತೊ ಅದ್ದಿ ಭಿಕ್ ಮಾಗುನ್ಗೆತ್ ಬಸಲ್ಲೆ ಬಗಲ್ಲ್ಯಾ ಲೊಕಾನಿ, “ಹ್ಯೊ ಹಿತ್ತೆ ಸದ್ದಿ ಭಿಕ್ ಮಾಗುಕ್ ಬಸ್ತಲೊ ಮಾನುಸ್ ನ್ಹಯ್ ಕಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:8
9 ತಿಳಿವುಗಳ ಹೋಲಿಕೆ  

ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಮಗ್ಗುಲಲ್ಲಿ ಕೂತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು


ಆಮೇಲೆ ಅವರು ಯೆರಿಕೋವಿಗೆ ಬಂದರು. ಆತನೂ ಆತನ ಶಿಷ್ಯರೂ ಬಹು ಜನರ ಗುಂಪೂ ಆ ಊರಿನಿಂದ ಹೊರಟು ಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕೂತಿದ್ದನು.


ಆಕೀಷನ ಸೇವಕರು - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂಬದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೋ? ಎಂದು ಮಾತಾಡಿಕೊಂಡರು.


ಹಾಗೆಯೇ ಪ್ರಯಾಣ ಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇವಿುಗೆ ಬಂದು ಊರೊಳಕ್ಕೆ ಹೋದಾಗ ಅಲ್ಲೆಲ್ಲಾ ಗದ್ದಲವಾಯಿತು. ಸ್ತ್ರೀಯರು - ಈಕೆಯು ನೊವೊವಿುಯಲ್ಲವೋ ಎಂದು ಮಾತಾಡತೊಡಗಲು


ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ದಯವನ್ನು ವಿಶೇಷವಾಗಿ ತೋರಿಸಿದ್ದಾನೆಂಬದನ್ನು ಕೇಳಿ ಆಕೆಯ ಕೂಡ ಸಂತೋಷಪಟ್ಟರು.


ಕೆಲವರು - ಹೌದು, ಅವನೇ ಅಂದರು; ಇನ್ನೂ ಕೆಲವರು - ಅವನಲ್ಲ, ಅವನ ಹಾಗಿದ್ದಾನೆ ಅಂದರು. ಅವನಾದರೆ - ನಾನೇ ಅವನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು