ರೂತಳು 1:1 - ಕನ್ನಡ ಸತ್ಯವೇದವು J.V. (BSI)1 ನ್ಯಾಯಸ್ಥಾಪಕರು ಆಳುತ್ತಿದ್ದಾಗ ದೇಶದಲ್ಲಿ ಬರ ಬಂದದರಿಂದ ಯೆಹೂದಪ್ರಾಂತದ ಬೇತ್ಲೆಹೇವಿುನವನೊಬ್ಬನು ತನ್ನ ಹೆಂಡತಿ, ಇಬ್ಬರು ಕುಮಾರರು ಇವರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನ್ಯಾಯಾಧೀಶರು ಆಳುತ್ತಿದ್ದಾಗ ದೇಶದಲ್ಲಿ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡುಮಕ್ಕಳೊಡನೆ ಯೆಹೂದಪ್ರಾಂತದ ಬೆತ್ಲೆಹೇಮ್ ನಗರವನ್ನು ಬಿಟ್ಟು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನ್ಯಾಯಸ್ಥಾಪಕರು ಆಳುತ್ತಿದ್ದ ಆ ದಿನಗಳಲ್ಲಿ ಇಸ್ರಾಯೇಲ್ ದೇಶದೊಳಗೆ ಬರ ಉಂಟಾಗಿದ್ದಾಗ, ಯೆಹೂದದ ಬೇತ್ಲೆಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ತನ್ನ ಇಬ್ಬರು ಪುತ್ರರೊಂದಿಗೆ ಮೋವಾಬ್ ದೇಶದಲ್ಲಿ ಸ್ವಲ್ಪ ಕಾಲ ವಾಸಮಾಡಬೇಕೆಂದು ಹೋದನು. ಅಧ್ಯಾಯವನ್ನು ನೋಡಿ |