Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:16 - ಕನ್ನಡ ಸತ್ಯವೇದವು J.V. (BSI)

16 ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ರೂತಳು: “ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನು ಅಲ್ಲೇ ವಾಸಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದಕ್ಕೆ ರೂತಳು, “ನಿನ್ನನ್ನು ಬಿಟ್ಟು ಸ್ವಜನರ ಬಳಿಗೆ ಹಿಂದಿರುಗಿ ಹೋಗೆಂದು ನನಗೆ ಒತ್ತಾಯ ಮಾಡಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು. ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು. ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ರೂತಳು, “ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:16
23 ತಿಳಿವುಗಳ ಹೋಲಿಕೆ  

ಅದಕ್ಕೆ ಇತ್ತೈ - ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಜೀವಹೋದರೂ ಉಳಿದರೂ ನನ್ನ ಒಡೆಯನಾದ ಅರಸನಿರುವಲ್ಲಿಗೆ ಹೋಗುವೆನು ಎಂದು ಉತ್ತರಕೊಟ್ಟನು.


ಎಲೌ ಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತವರುಮನೆಯನ್ನೂ ಮರೆತುಬಿಡು.


ಆಗ ಒಬ್ಬ ಶಾಸ್ತ್ರಿಯು ಹತ್ತರಕ್ಕೆ ಬಂದು ಆತನಿಗೆ - ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂದೆ ಬರುತ್ತೇನೆ ಎಂದು ಹೇಳಲು


ಪೇತ್ರನು ಆತನಿಗೆ - ಸ್ವಾಮೀ, ನಾನು ಯಾಕೆ ಈಗ ನಿನ್ನ ಹಿಂದೆ ಬರಲಾರೆನು? ನಿನಗಾಗಿ ನನ್ನ ಪ್ರಾಣವನ್ನಾದರೂ ಕೊಟ್ಟೇನು ಎಂದು ಹೇಳಲು


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ನಾನಾದರೋ ನೀನು ಐಗುಪ್ತದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ. ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ವಿನಹ ಯಾವ ರಕ್ಷಕನೂ ಇಲ್ಲ.


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಈ ದೇಶವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವಜನಾಂಗಗಳನ್ನು ನಮ್ಮ ಮುಂದೆ ಹೊರಡಿಸಿ ಬಿಟ್ಟವನು ಆತನೇ. ಆದದರಿಂದ ನಾವೂ ಯೆಹೋವನನ್ನೇ ಸೇವಿಸುವೆವು; ಆತನೇ ನಮ್ಮ ದೇವರು ಎಂದು ಉತ್ತರಕೊಟ್ಟರು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಸಕಲ ಜನಾಂಗಕುಲಭಾಷೆಗಳವರಲ್ಲಿ ಯಾರಾದರೂ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರ ವಿಷಯದಲ್ಲಿ ಅಲ್ಲದ ಮಾತನ್ನಾಡಿದರೆ ಅವರನ್ನು ಚೂರುಚೂರಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲಾ ಎಂದು ಹೇಳಿದನು.


ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು.


ಇವನು ನಿನ್ನನ್ನು ಉಜ್ಜೀವಿಸಮಾಡುವನು; ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ ಎಂದು ಹೇಳಿದರು.


ವಿುತ್ರನ ಪ್ರೀತಿಯು ನಿರಂತರ; ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ಅವನು - ನೊವೊವಿುಯ ಸಂಗಡ ಬಂದ ಮೋವಾಬ್‍ಸ್ತ್ರೀಯು;


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು