Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:19 - ಕನ್ನಡ ಸತ್ಯವೇದವು J.V. (BSI)

19 ಹಾಗೆಯೇ ಪ್ರಯಾಣ ಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇವಿುಗೆ ಬಂದು ಊರೊಳಕ್ಕೆ ಹೋದಾಗ ಅಲ್ಲೆಲ್ಲಾ ಗದ್ದಲವಾಯಿತು. ಸ್ತ್ರೀಯರು - ಈಕೆಯು ನೊವೊವಿುಯಲ್ಲವೋ ಎಂದು ಮಾತಾಡತೊಡಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹಾಗೆಯೇ ಪ್ರಯಾಣವನ್ನು ಮುಂದುವರೆಸಿ ಅವರಿಬ್ಬರೂ ಬೆತ್ಲೆಹೇಮನ್ನು ತಲುಪಿದರು. ಅವರು ಊರಿಗೆ ಹಿಂದಿರುಗಿ ಬಂದ ಸಂಗತಿ ಜನರಲ್ಲಿ ಕುತೂಹಲ ಮೂಡಿಸಿತು. ಊರಿನ ಹೆಂಗಸರು, “ಈಕೆ ನವೊಮಿಯಲ್ಲವೇ?” ಎಂದು ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರಿಬ್ಬರೂ ಪ್ರಯಾಣ ಮಾಡಿ ಬೆತ್ಲೆಹೇಮ್ ಊರಿಗೆ ತಲುಪಿದರು. ಅವರಿಬ್ಬರನ್ನು ಕಂಡಾಗ ಬೆತ್ಲೆಹೇಮ್ ಪಟ್ಟಣದ ಜನರಿಗೆ ಆಶ್ಚರ್ಯವಾಯಿತು. “ಇವಳು ನೊವೊಮಿಯೇ?” ಎಂದು ಅವರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ನಡೆದುಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣದವರಲ್ಲಿ ಕುತೂಹಲ ಮೂಡಿಸಿತು. ಅವರು, “ಇವಳು ನೊವೊಮಿಯೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:19
6 ತಿಳಿವುಗಳ ಹೋಲಿಕೆ  

ಆತನು ಯೆರೂಸಲೇಮನ್ನು ಸೇರಲು ಪಟ್ಟಣವೆಲ್ಲಾ ಗದ್ದಲವಾಗಿ, ಈತನು ಯಾರು? ಅಂದರು.


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ. ಯೆರೂಸಲೇಮ್ ನಗರಿಯನ್ನು ಕಂಡು - ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನಿಸಿಕೊಳ್ಳುತ್ತಿದ್ದ ಪುರಿಯು ಇದೇಯೋ? ಛೀ ಛೀ ಎಂದು ತಲೆಯಾಡಿಸುತ್ತಾರೆ.


ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅದರ ಜನರು ಮುಂದೆ ನಡೆದು ಅತಿ ದೂರದಲ್ಲಿಯೂ ನಿವಾಸಮಾಡಿಕೊಂಡಿದ್ದರಲ್ಲಾ.


ಆಕೆಯು ಅವರಿಗೆ - ನನ್ನನ್ನು ನೊವೊವಿುಯೆಂದು ಕರೆಯಬೇಡಿರಿ; ಸರ್ವಶಕ್ತನು ನನ್ನನ್ನು ಬಹಳವಾಗಿ ದುಃಖಪಡಿಸಿದ್ದಾನೆ. ಆದದರಿಂದ ಮಾರಾ ಎಂದು ಕರೆಯಿರಿ.


ಅವನು - ನೊವೊವಿುಯ ಸಂಗಡ ಬಂದ ಮೋವಾಬ್‍ಸ್ತ್ರೀಯು;


ಬೇತ್ಗಾದೇರಿನವರ ಮೂಲಪುರುಷನಾದ ಹಾರೇಫ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು