ರೂತಳು 1:2 - ಕನ್ನಡ ಸತ್ಯವೇದವು J.V. (BSI)2 ಆ ಮನುಷ್ಯನಿಗೆ ಎಲೀಮೆಲೆಕನೆಂದೂ ಅವನ ಹೆಂಡತಿಗೆ ನೊವೊವಿುಯೆಂದೂ ಇಬ್ಬರು ಮಕ್ಕಳಿಗೆ ಮಹ್ಲೋನ್, ಕಿಲ್ಯೋನ್ ಎಂದೂ ಹೆಸರು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇವಿುನವರಾದ ಇವರು ಬಂದು ಮೋವಾಬ್ ದೇಶದಲ್ಲಿ ಪ್ರವಾಸವಾಗಿದ್ದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಮನುಷ್ಯನ ಹೆಸರು ಎಲೀಮೆಲೆಕ, ಅವನ ಹೆಂಡತಿ ನವೊಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನ ಹೆಸರು ಎಲಿಮೆಲೆಕ್; ಅವನ ಪತ್ನಿಯ ಹೆಸರು ನವೊಮಿ. ಮಹ್ಲೋನ್ ಮತ್ತು ಕಿಲ್ಯೋನ್ ಅವರ ಇಬ್ಬರು ಪುತ್ರರು. ಇವರು ಇಸ್ರಯೇಲ್ ವಂಶದ ಎಫ್ರಾತಕುಲಕ್ಕೆ ಸೇರಿದವರು, ಬೆತ್ಲೆಹೇಮಿನವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನ ಹೆಂಡತಿಯ ಹೆಸರು “ನೊವೊಮಿ.” ಅವನ ಇಬ್ಬರು ಗಂಡುಮಕ್ಕಳ ಹೆಸರುಗಳು: ಮಹ್ಲೋನ್ ಮತ್ತು ಕಿಲ್ಯೋನ್. ಅವರು ಯೆಹೂದಪ್ರಾಂತದ ಎಫ್ರಾತಿಗೆ ಸೇರಿದ ಬೆತ್ಲೆಹೇಮಿನ ನಿವಾಸಿಗಳು. ಇವರು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋಗಿ ಅಲ್ಲಿಯೇ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ಮನುಷ್ಯನ ಹೆಸರು ಎಲೀಮೆಲೆಕನು. ಅವನ ಹೆಂಡತಿಯ ಹೆಸರು ನೊವೊಮಿ. ಅವನ ಪುತ್ರರಲ್ಲಿ ಒಬ್ಬನ ಹೆಸರು ಮಹ್ಲೋನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಬಂದು ಮೋವಾಬ್ ದೇಶದಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |