Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:21 - ಕನ್ನಡ ಸತ್ಯವೇದವು J.V. (BSI)

21 ಭಾಗ್ಯವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಬರಮಾಡಿದನು. ಯೆಹೋವನು ನನಗೆ ವಿರೋಧವಾಗಿ ಸಾಕ್ಷಿಹೇಳಿದ್ದಾನೆ; ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಇದರಿಂದ ನೀವು ನನ್ನನ್ನು ನೊವೊವಿುಯೆಂದು ಕರೆಯುವದು ಹೇಗೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸಿರಿವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಹಿಂತಿರುಗುವಂತೆ ಮಾಡಿದನು. ಯೆಹೋವನು ನನಗೆ ವಿರೋಧವಾಗಿದ್ದಾನೆ, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಹೀಗಿರುವಾಗ ನೀವು ನನ್ನನ್ನು ನವೊಮಿಯೆಂದು ಕರೆಯುವುದು ಸರಿಯೇ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸಿರಿವಂತಳಾಗಿ ಇಲ್ಲಿಂದ ಹೋದೆ. ಗತಿಹೀನಳನ್ನಾಗಿ ಸರ್ವೇಶ್ವರ ನನ್ನನ್ನು ಹಿಂದಕ್ಕೆ ಕರೆತಂದಿದ್ದಾರೆ. ಹೀಗೆ ಸರ್ವಶಕ್ತ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವಾಗ ನೀವು ನನ್ನನ್ನು ನವೊಮಿ ಎಂದು ಕರೆಯುವುದು ಸರಿಯೇ?’ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಲ್ಲಿಂದ ಹೋಗುವಾಗ ಭಾಗ್ಯವಂತಳಾಗಿ ಹೋದೆನು; ಆದರೆ ಈಗ ಯೆಹೋವನು ನನ್ನನ್ನು ಬರಿಗೈಯಲ್ಲಿ ಮನೆಗೆ ಕರೆತಂದಿದ್ದಾನೆ. ಯೆಹೋವನು ನನ್ನನ್ನು ದುಃಖಿತಳನ್ನಾಗಿ ಮಾಡಿದ್ದಾನೆ. ಹೀಗಿರುವಾಗ ನೀವೇಕೆ ನನ್ನನ್ನು ‘ನೊವೊಮಿ’ ಎಂದು ಕರೆಯಬೇಕು? ಸರ್ವಶಕ್ತನಾದ ದೇವರು ನನಗೆ ಸಾಕಷ್ಟು ಕಷ್ಟ ಕೊಟ್ಟಿದ್ದಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಪರಿಪೂರ್ಣಳಾಗಿ ಹೊರಟುಹೋದೆನು. ಯೆಹೋವ ದೇವರು ನನ್ನನ್ನು ಏನೂ ಇಲ್ಲದೆ ಬರಮಾಡಿದ್ದಾರೆ. ಯೆಹೋವ ದೇವರು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತರಾದ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವುದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವುದು ಸರಿಯೇ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:21
8 ತಿಳಿವುಗಳ ಹೋಲಿಕೆ  

ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.


ನೀನು ನನ್ನನ್ನು ಹಿಡಿದಿರುವದು ನನಗೆ ಪ್ರತಿಸಾಕ್ಷಿಯಾಗಿದೆ, ನನ್ನ ಕ್ಷೀಣತ್ವವು ನನಗೆ ವಿರುದ್ಧವಾಗಿ ಎದ್ದು ನನ್ನ ಮುಖದ ಮುಂದೆ ಸಾಕ್ಷಿಕೊಡುತ್ತದೆ.


ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು ನನ್ನ ಯೌವನದ ಪಾಪಗಳ ಫಲದ ಬಾಧ್ಯತೆಯನ್ನು ನನಗೆ ಕೊಟ್ಟಿದ್ದೀ.


ನನಗೆ ವಿರೋಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವದಲ್ಲಾ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.


ಅವರು ದೊಡ್ಡವರಾಗುವ ತನಕ ಕಾದಿರುವಿರೋ? ಅಲ್ಲಿಯವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನಗೆ ವಿರೋಧವಾಗಿರುವದರಿಂದ ನಿಮಗೋಸ್ಕರ ಬಹಳ ದುಃಖಪಡುತ್ತೇನೆ ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು