Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:22 - ಕನ್ನಡ ಸತ್ಯವೇದವು J.V. (BSI)

22 ಹೀಗೆ ನೊವೊವಿುಯು ಮೋವಾಬ್ಯಳೂ ತನ್ನ ಸೊಸೆಯೂ ಆದ ರೂತಳೊಡನೆ ಬೇತ್ಲೆಹೇವಿುಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗೆ ನವೊಮಿ ತನ್ನ ಮೋವಾಬ್ಯ ಸೊಸೆಯಾದ ರೂತಳ ಸಂಗಡ ಬೆತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿ ಪ್ರಾರಂಭವಾಗಿತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹೀಗೆ ನೊವೊಮಿ ಮತ್ತು ಅವಳ ಸೊಸೆ ಮೋವಾಬ್ಯಳಾದ ರೂತಳು ಮೋವಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದರು. ಯೆಹೂದ ದೇಶದ ಬೆತ್ಲೆಹೇಮಿಗೆ ಇವರಿಬ್ಬರೂ ಜವೆಗೋಧಿಯ ಸುಗ್ಗಿಯ ಆರಂಭಕಾಲದಲ್ಲಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತಳೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶದಿಂದ ತಿರುಗಿಬಂದಳು. ಅವರು ಜವೆಗೋಧಿಯ ಸುಗ್ಗಿಯ ಕಾಲ ಪ್ರಾರಂಭವಾದಾಗ ಬೇತ್ಲೆಹೇಮಿಗೆ ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:22
6 ತಿಳಿವುಗಳ ಹೋಲಿಕೆ  

ಅದರಂತೆಯೇ ರೂತಳು ಅತ್ತೆಯ ಮನೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ತೀರುವವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು.


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭವಾಗಿತ್ತು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ [ಜವೆಗೋದಿಯ] ಪೈರನ್ನು ಕೊಯ್ಯುವಾಗ ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು. ನೀವು ಅಂಗೀಕಾರವಾಗುವಂತೆ ಅವನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.


ಸಬ್ಬತ್‍ದಿನದ ಮಾರಣೆಯ ದಿನದಲ್ಲಿಯೇ ಅದನ್ನು ನಿವಾಳಿಸಬೇಕು.


ಅವನು - ನೊವೊವಿುಯ ಸಂಗಡ ಬಂದ ಮೋವಾಬ್‍ಸ್ತ್ರೀಯು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು