ರೂತಳು 1:6 - ಕನ್ನಡ ಸತ್ಯವೇದವು J.V. (BSI)6 ಯೆಹೋವನು ತನ್ನ ಜನರನ್ನು ಕಟಾಕ್ಷಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನೊವೊವಿುಯು ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ಸೊಸೆಯರೊಡನೆ ಹೊರಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದು ಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಲ್ಲಿದ್ದಾಗ ಯೆಹೋವನು ತನ್ನ ಜನರಿಗೆ ಕರುಣೆತೋರಿ ಆಹಾರವನ್ನು ಒದಗಿಸಿರುವ ಸುದ್ದಿಯು ನೊವೊಮಿಗೆ ತಿಳಿಯಿತು. ಆದ್ದರಿಂದ ಆಕೆಯು ಮೋವಾಬ್ ಬೆಟ್ಟಪ್ರದೇಶವನ್ನು ಬಿಟ್ಟು ತನ್ನ ಊರಿಗೆ ಹೋಗಲು ನಿರ್ಧರಿಸಿದಳು. ಅವಳ ಸೊಸೆಯಂದಿರು ಸಹ ಅವಳ ಸಂಗಡ ಹೋಗಲು ತೀರ್ಮಾನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ತಮ್ಮ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದರೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು. ಅಧ್ಯಾಯವನ್ನು ನೋಡಿ |