ರೂತಳು 2:11 - ಕನ್ನಡ ಸತ್ಯವೇದವು J.V. (BSI)11 ಬೋವಜನು - ನಿನ್ನ ಗಂಡನು ಸತ್ತ ಮೇಲೆ ನೀನು ಅತ್ತೆಯನ್ನು ಪ್ರೀತಿಸಿ ತಂದೆತಾಯಿಗಳನ್ನೂ ಸ್ವದೇಶವನ್ನೂ ಬಿಟ್ಟು ನೀನು ಈವರೆಗೂ ಅರಿಯದ ಜನರ ಬಳಿಗೆ ಬಂದಿರುವಿಯೆಂಬದು ನನಗೆ ಚೆನ್ನಾಗಿ ಗೊತ್ತಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಬೋವಜನು, “ನಿನ್ನ ಪತಿ ತೀರಿಹೋದಂದಿನಿಂದ ನೀನು ಅತ್ತೆಗಾಗಿ ಮಾಡಿದ್ದ ಎಲ್ಲವನ್ನೂ ಕುರಿತು ಕೇಳಿದ್ದೇನೆ. ನೀನು ಹೇಗೆ ನಿನ್ನ ತಂದೆತಾಯಿಗಳನ್ನು ಮತ್ತು ಸ್ವಂತ ನಾಡನ್ನು ಬಿಟ್ಟು, ಅಪರಿಚಿತರಾದ ಜನರ ಮಧ್ಯೆ ವಾಸಿಸಲು ಬಂದಿರುವೆ ಎಂಬುದು ಸಹ ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಬೋವಜನು ಅವಳಿಗೆ ಉತ್ತರವಾಗಿ, “ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿದ್ದೆಲ್ಲವೂ ನೀನು ನಿನ್ನ ತಂದೆತಾಯಿಗಳನ್ನೂ ನೀನು ಹುಟ್ಟಿದ ದೇಶವನ್ನೂ ಬಿಟ್ಟು ನೀನು ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿದಿದೆ. ಅಧ್ಯಾಯವನ್ನು ನೋಡಿ |