ರೂತಳು 2:13 - ಕನ್ನಡ ಸತ್ಯವೇದವು J.V. (BSI)13 ಆಗ ಆಕೆಯು - ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತಾಡಿಸಿದಿರಿ ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ರೂತಳು, “ಒಡೆಯಾ, ತಾವು ನನಗೆ ದೊಡ್ಡ ಉಪಕಾರವನ್ನು ಮಾಡಿದ್ದೀರಿ. ನಾನು ತಮ್ಮ ದಾಸಿ ಎನಿಸಿಕೊಳ್ಳುವುದಕ್ಕೂ ಯೋಗ್ಯಳಲ್ಲ. ಆದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿದ್ದೀರಿ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು. ಅಧ್ಯಾಯವನ್ನು ನೋಡಿ |