Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:14 - ಕನ್ನಡ ಸತ್ಯವೇದವು J.V. (BSI)

14 ಊಟದ ವೇಳೆಯಾದಾಗ ಬೋವಜನು - ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು ಎಂದು ಕರೆಯಲು ಆಕೆಯು ಹೋಗಿ ಕೊಯ್ಯುವವರ ಬಳಿಯಲ್ಲಿ ಕೂತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಊಟದ ಸಮಯದಲ್ಲಿ ಬೋವಜನು ರೂತಳನ್ನು ಕರೆದು, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ದ್ರಾಕ್ಷಾರಸದಲ್ಲಿ ಅದ್ದಿ ತಿನ್ನು,” ಎಂದನು. ಆಕೆ ಕೊಯ್ಯುವವರ ಸಂಗಡ ಕುಳಿತುಕೊಂಡಳು. ಇದಲ್ಲದೆ ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಅವಳು ತೃಪ್ತಿಯಾಗಿ ಊಟಮಾಡಿ ಇನ್ನೂ ಸ್ವಲ್ಪ ಉಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು. ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಊಟದ ವೇಳೆಯಲ್ಲಿ ಬೋವಜನು ಅವಳಿಗೆ, “ಇಲ್ಲಿ ಹತ್ತಿರ ಬಂದು ರೊಟ್ಟಿ ತಿಂದು ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು,” ಎಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು, ಇನ್ನೂ ಉಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:14
17 ತಿಳಿವುಗಳ ಹೋಲಿಕೆ  

ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು ಅತ್ತೆಗೆ ತೋರಿಸಿ ತಾನು ಉಳಿಸಿಟ್ಟಿದ್ದನ್ನು ತೆಗೆದುಕೊಟ್ಟಳು.


ಅವರೆಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.


ನೀವು ಹೊಟ್ಟೆತುಂಬಾ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟದ್ದಕ್ಕಾಗಿ ಆತನನ್ನು ಸ್ತುತಿಸಬೇಕು.


ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಬರ್ಜಿಲ್ಲೈ ಎಂಬವರು ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳನ್ನೂ ಊಟಕ್ಕಾಗಿ ಗೋದಿ ಜವೇಗೋದಿ ಹಿಟ್ಟು ಹುರಿಗಾಳು ಅವರೆ ಅಲಸಂದಿ ಬೇಳೆ ಜೇನುತುಪ್ಪ


ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೇಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ ತನ್ನ ಸೇವಕರಿಗೆ -


ಒಂದು ದಿವಸ ಇಷಯನು ತನ್ನ ಮಗನಾದ ದಾವೀದನಿಗೆ - ಇಗೋ, ಇಲ್ಲಿ ಮೂವತ್ತು ಸೇರು ಹುರಿಗಾಳೂ ಹತ್ತು ರೊಟ್ಟಿಗಳೂ ಇರುತ್ತವೆ. ಇವುಗಳನ್ನು ತೆಗೆದುಕೊಂಡು ಶೀಘ್ರವಾಗಿ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಡು.


ಅಡವಿಯಲ್ಲಿ ದನಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.


ಆಗ ಆಕೆಯು - ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತಾಡಿಸಿದಿರಿ ಅಂದಳು.


ತರುವಾಯ ತಿರಿಗಿ ಹಕ್ಕಲಾಯುವದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ - ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ, ಬೈಯಬೇಡಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು