Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:15 - ಕನ್ನಡ ಸತ್ಯವೇದವು J.V. (BSI)

15 ತರುವಾಯ ತಿರಿಗಿ ಹಕ್ಕಲಾಯುವದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ - ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ, ಬೈಯಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವಳು ಪುನಃ ಹಕ್ಕಲು ತೆನೆಗಳನ್ನು ಆರಿಸಿಕೊಳ್ಳಲು ಹೋದಾಗ, ಬೋವಜನು ತನ್ನ ಆಳುಗಳಿಗೆ, “ಸಿವುಡುಗಳ ಮಧ್ಯದಲ್ಲೂ ಅವಳು ತೆನೆಗಳನ್ನು ಆರಿಸಿಕೊಳ್ಳಲಿ; ಅಡ್ಡಿಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ರೂತಳು ಎದ್ದು ಪುನಃ ಕೆಲಸಕ್ಕೆ ಹೋದಳು. ಆಗ ಬೋವಜನು ತನ್ನ ಸೇವಕರಿಗೆ, “ರೂತಳು ಕಣದಲ್ಲಿರುವ ಸಿವುಡುಗಳ ಸುತ್ತಲೂ ಹಕ್ಕಲು ಆರಿಸಿಕೊಳ್ಳಲಿ; ಅವಳನ್ನು ತಡೆಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವಜನು ತನ್ನ ಸೇವಕರಿಗೆ ಆಜ್ಞಾಪಿಸಿ, “ಇವಳು ಕೊಯ್ದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ಬೈಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:15
5 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು, ಮತ್ತು ಹಕ್ಕಲಾಯಬಾರದು. ಇವನ್ನು ಬಡವರಿಗೋಸ್ಕರವೂ ಪರದೇಶದವರಿಗೋಸ್ಕರವೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು.


ಊಟದ ವೇಳೆಯಾದಾಗ ಬೋವಜನು - ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು ಎಂದು ಕರೆಯಲು ಆಕೆಯು ಹೋಗಿ ಕೊಯ್ಯುವವರ ಬಳಿಯಲ್ಲಿ ಕೂತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಟ್ಟುಕೊಂಡಳು.


ಕಟ್ಟುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ ಎಂದು ಆಜ್ಞಾಪಿಸಿದನು.


ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು; ಮತ್ತು ಕೊಯ್ದಾಗ ಹಕ್ಕಲಾಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು