Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:2 - ಕನ್ನಡ ಸತ್ಯವೇದವು J.V. (BSI)

2 ಮೋವಾಬ್ಯಳಾದ ರೂತಳು ನೊವೊವಿುಗೆ - ನಾನು ಹೋಗಿ ಯಾವನು ನನಗೆ ದಯೆತೋರಿಸುವನೋ ಅವನ ಹೊಲದಲ್ಲಿ ಹಕ್ಕಲತೆನೆಗಳನ್ನು ಕೂಡಿಸಿಕೊಂಡು ಬರುವೆನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಂದು ದಿನ ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಗಳಿಗೆ ಹೋಗುತ್ತೇನೆ. ಯಾರಾದರೂ ದಯೆತೋರಿ ತಮ್ಮ ಹೊಲದಲ್ಲಿ ಹಕ್ಕಲನ್ನು ಆರಿಸಲು ಅನುಮತಿ ಕೊಡಬಹುದು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಕ್ಕೆ ಹೋಗಿ ಯಾರ ದಯೆಯು ನನಗೆ ಆಗುವುದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿ ಕೊಳ್ಳುವೆನು,” ಎಂದಳು. ನೊವೊಮಿ, “ಹೋಗಿ ಬಾ, ಮಗಳೇ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:2
9 ತಿಳಿವುಗಳ ಹೋಲಿಕೆ  

ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು, ಮತ್ತು ಹಕ್ಕಲಾಯಬಾರದು. ಇವನ್ನು ಬಡವರಿಗೋಸ್ಕರವೂ ಪರದೇಶದವರಿಗೋಸ್ಕರವೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು.


ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು; ಮತ್ತು ಕೊಯ್ದಾಗ ಹಕ್ಕಲಾಯಬಾರದು.


ಇವಳು - ಕೊಯ್ಯುವವರ ಹಿಂದಿನಿಂದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ತನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಈಕೆಯು ಮನೆಯಲ್ಲಿ ಹೆಚ್ಚಾಗಿ ಕಾಲ ಕಳೆಯಲಿಲ್ಲ; ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ ಅಂದನು.


ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ಮತ್ತೊಬ್ಬನಿಗೆ ಮರಣ ಶಿಕ್ಷೆಯಾಗಲೇಬೇಕೆಂದು ಛಲ ಹಿಡಿಯಬಾರದು. ನಾನು ಯೆಹೋವನು.


ದ್ರಾಕ್ಷೆಯ ತೋಟಗಳಲ್ಲಿಯೂ ಹಕ್ಕಲಾಯಕೂಡದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಅದಕ್ಕವಳು - ನನ್ನ ಮಗಳೇ, ಹೋಗು ಎನ್ನಲು ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವಾಸ್ತ್ಯವಾಗಿದ್ದ ಹೊಲಕ್ಕೆ ಹೋಗಿ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.


ತರುವಾಯ ಆ ದೂತರು ಯಾಕೋಬನ ಬಳಿಗೆ ತಿರಿಗಿ ಬಂದು - ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆಂದು ಹೇಳಿದಾಗ


ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆಮೇಲೆ ಆಕೆಯ ಮೋರೆಯಲ್ಲಿ ದುಃಖವು ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು