Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:20 - ಕನ್ನಡ ಸತ್ಯವೇದವು J.V. (BSI)

20 ಆಗ ನೊವೊವಿುಯು - ಸತ್ತವರಿಗೂ ಬದುಕುವವರಿಗೂ ಬಿಡದೆ ದಯೆತೋರಿಸುತ್ತಿರುವ ಇವನು ಯೆಹೋವನಿಂದ ಆಶೀರ್ವಾದ ಹೊಂದಲಿ ಎಂದು ಹೇಳಿ, ಆ ಮನುಷ್ಯನು ತಮ್ಮ ಸಂಬಂಧಿಕನೆಂದೂ ಸಮೀಪಬಂಧುಗಳಲ್ಲೊಬ್ಬನೆಂದೂ ರೂತಳಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ಕೇಳಿದ ನವೊಮಿ ಆವೇಶದಿಂದ, “ಜೀವಂತರಿಗೂ ಮೃತರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಸರ್ವೇಶ್ವರ ಅವನನ್ನು ಆಶೀರ್ವದಿಸಲಿ!” ಎಂದು ಹರಸಿ, “ಆ ಮನುಷ್ಯ ನಮಗೆ ಹತ್ತಿರದ ನೆಂಟ, ನಮ್ಮನ್ನು ಪೋಷಿಸಬೇಕಾದವನು,” ಎಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೊವೊಮಿಯು ತನ್ನ ಸೊಸೆಗೆ, “ಯೆಹೋವನು ಅವನಿಗೆ ಕೃಪೆತೋರಲಿ. ಯೆಹೋವನು ಸತ್ತುಹೋದವರಿಗೂ ಬದುಕಿರುವವರಿಗೂ ದಯೆತೋರಿಸುತ್ತಾನೆ” ಎಂದು ಹೇಳಿದಳು. ಆಮೇಲೆ ನೊವೊಮಿಯು ತನ್ನ ಸೊಸೆಗೆ, “ಬೋವಜನು ನಮ್ಮ ಸಂಬಂಧಿಗಳಲ್ಲೊಬ್ಬನಲ್ಲದೆ ನಮ್ಮ ಸಮೀಪದ ಬಂಧುವೂ ನಮ್ಮ ಸಂರಕ್ಷಕನೂ ಆಗಿದ್ದಾನೆ” ಎಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೊವೊಮಿ ತನ್ನ ಸೊಸೆಗೆ, “ಜೀವಂತ ಇರುವವರಿಗೂ ಸತ್ತವರಿಗೂ ದಯೆ ತೋರಿಸುತ್ತಿರುವ ಯೆಹೋವ ದೇವರಿಂದ ಅವನಿಗೆ ಆಶೀರ್ವಾದವಾಗಲಿ,” ಎಂದಳು. ಅನಂತರ ನೊವೊಮಿ ಅವಳಿಗೆ, “ಆ ಮನುಷ್ಯನು ನಮ್ಮ ಬಂಧುವೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:20
15 ತಿಳಿವುಗಳ ಹೋಲಿಕೆ  

ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ - ನೀವು ಕರುಣೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಅಶೀರ್ವಾದವುಂಟಾಗಲಿ.


ವಿುತ್ರನ ಪ್ರೀತಿಯು ನಿರಂತರ; ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಸ್ಥಿತಿಯಲ್ಲಿ ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.


ನನ್ನ ವಿಷಯವಾದ ನಿಮ್ಮ ಯೋಚನೆಯೆಂಬ ಬಳ್ಳಿಯು ಇಷ್ಟು ದಿವಸಗಳಾದ ಮೇಲೆ ಪುನಃ ಚಿಗುರಿದ್ದಕ್ಕೆ ನಾನು ಕರ್ತನ ನಿವಿುತ್ತ ಬಹಳವಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ನಿಜವಾಗಿ ಇರುತ್ತಿದ್ದರೂ ಇದುವರೆಗೆ ಅದರ ಪ್ರಕಾರ ಮಾಡುವದಕ್ಕೆ ಸಂದರ್ಭ ಸಿಕ್ಕಲಿಲ್ಲವೇನೋ.


ನಾನಂತು ನನ್ನ ವಿಮೋಚಕನು ಜೀವಸ್ವರೂಪನೆಂದು ಬಲ್ಲೆನು; ಆತನು ಕಡೆಗೆ ದೂಳಿನ ಮೇಲೆ [ಸಾಕ್ಷಿಯಾಗಿ] ನಿಂತುಕೊಳ್ಳುವನು;


[ಒಂದು ದಿವಸ] ದಾವೀದನು - ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿರುತ್ತಾರೋ? ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ ಅನ್ನಲು


ಆಗ ಹೆಂಗಸರು ನೊವೊವಿುಗೆ - ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಹೆಸರು ಹೊಂದಲಿ.


ಆ ಸಮೀಪಬಂಧುವು - ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು ಅಂದನು.


ಆಗ ಮೋವಾಬ್ಯಳಾದ ರೂತಳು - ಇದಲ್ಲದೆ ಆ ಮನುಷ್ಯನು ನನಗೆ - ಸುಗ್ಗಿಯೆಲ್ಲಾ ತೀರುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನೆ ಅನ್ನಲು


ನಾನು ಸಮೀಪ ಬಂಧುವೆಂಬದು ನಿಜ; ಆದರೂ ನನಗಿಂತ ಸಮೀಪನಾದವನು ಒಬ್ಬನಿರುತ್ತಾನೆ.


ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕೂತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ. ಇಲ್ಲದಿದ್ದರೆ ನನಗೆ ತಿಳಿಸು; ನನಗೆ ಗೊತ್ತಾಗಬೇಕು. ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ ಎಂದು ಹೇಳಲು ಅವನು - ನಾನೇ ಕೊಂಡುಕೊಳ್ಳುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು