Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:6 - ಕನ್ನಡ ಸತ್ಯವೇದವು J.V. (BSI)

6 ಅವನು - ನೊವೊವಿುಯ ಸಂಗಡ ಬಂದ ಮೋವಾಬ್‍ಸ್ತ್ರೀಯು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು “ಈಕೆಯು ಮೋವಾಬ್ ಸೀಮೆಯಿಂದ ನವೊಮಿಯ ಸಂಗಡ ಬಂದ ಮೋವಾಬ್ ಸ್ತ್ರೀ.” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಆ ಮೇಸ್ತ್ರಿ, “ಇವಳು ಮೋವಾಬ್ಯಳು, ನವೊಮಿಯ ಸಂಗಡ ಮೋವಾಬ್ ನಾಡಿನಿಂದ ಹಿಂದಿರುಗಿ ಬಂದವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಸೇವಕನು, “ಅವಳು ಮೋವಾಬ್ ಬೆಟ್ಟಪ್ರದೇಶದಿಂದ ನೊವೊಮಿಯ ಸಂಗಡ ಬಂದ ಮೋವಾಬ್ಯರ ಸ್ತ್ರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಆ ಮೇಲ್ವಿಚಾರಕನು, “ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಯುವತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:6
10 ತಿಳಿವುಗಳ ಹೋಲಿಕೆ  

ಹೀಗೆ ನೊವೊವಿುಯು ಮೋವಾಬ್ಯಳೂ ತನ್ನ ಸೊಸೆಯೂ ಆದ ರೂತಳೊಡನೆ ಬೇತ್ಲೆಹೇವಿುಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?


ಹಾಗೆಯೇ ಪ್ರಯಾಣ ಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇವಿುಗೆ ಬಂದು ಊರೊಳಕ್ಕೆ ಹೋದಾಗ ಅಲ್ಲೆಲ್ಲಾ ಗದ್ದಲವಾಯಿತು. ಸ್ತ್ರೀಯರು - ಈಕೆಯು ನೊವೊವಿುಯಲ್ಲವೋ ಎಂದು ಮಾತಾಡತೊಡಗಲು


ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.


ಅವನ ಮೇಲೆ ದಯೆ ಇಟ್ಟು ಅವನನ್ನು ಸ್ವಂತ ಸೇವಕನನ್ನಾಗಿ ನೇವಿುಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.


ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರೀ ಸೇವಕನಿಗೆ -


ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು.


ಸಂಜೇಹೊತ್ತಿಗೆ ದ್ರಾಕ್ಷೇತೋಟದ ಯಜಮಾನನು ತನ್ನ ಪಾರುಪತ್ಯಗಾರನಿಗೆ - ಆ ಆಳುಗಳನ್ನು ಕರೆದು ಕಡೆಗೆ ಬಂದವರನ್ನು ಮೊದಲು ಮಾಡಿಕೊಂಡು ಮೊದಲು ಬಂದವರ ತನಕ ಅವರಿಗೆ ಕೂಲಿಕೊಡು ಎಂದು ಹೇಳಿದನು.


ಬೋವಜನು ಕೊಯ್ಯುವವರ ಮೇಲಿರಿಸಿದ ತನ್ನ ಸೇವಕನನ್ನು - ಇವಳು ಯಾರ ಹುಡುಗಿ ಎಂದು ಕೇಳಿದ್ದಕ್ಕೆ


ಇವಳು - ಕೊಯ್ಯುವವರ ಹಿಂದಿನಿಂದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ತನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಈಕೆಯು ಮನೆಯಲ್ಲಿ ಹೆಚ್ಚಾಗಿ ಕಾಲ ಕಳೆಯಲಿಲ್ಲ; ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು