Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:7 - ಕನ್ನಡ ಸತ್ಯವೇದವು J.V. (BSI)

7 ಇವಳು - ಕೊಯ್ಯುವವರ ಹಿಂದಿನಿಂದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ತನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಈಕೆಯು ಮನೆಯಲ್ಲಿ ಹೆಚ್ಚಾಗಿ ಕಾಲ ಕಳೆಯಲಿಲ್ಲ; ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ಮಧ್ಯೆ ಹಕ್ಕಲಾಯ್ದುಕೊಳ್ಳುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲೇ ಇದ್ದಾಳೆ. ಸದ್ಯಕ್ಕೆ ನೆರಳಿನಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವಳು ಇಂದು ಬೆಳಗಿನ ಜಾವದಲ್ಲಿ ಬಂದು, ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾರಿಸಿಕೊಳ್ಳಬಹುದೇ? ಎಂದು ನನ್ನನ್ನು ಕೇಳಿದಳು. ಆಗಿನಿಂದ ಅವಳು ಆ ಕೆಲಸವನ್ನು ಮಾಡುತ್ತಿದ್ದಾಳೆ. ಆಕೆ ಸ್ವಲ್ಪ ಹೊತ್ತು ಮಾತ್ರ ಆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡಳು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇವಳು, ‘ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ನಡುವೆ ನಾನು ಹಕ್ಕಲಾರಿಸಿಕೊಳ್ಳುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೇಳಿಕೊಂಡಳು. ಸ್ವಲ್ಪ ಸಮಯ ನೆರಳಿನಲ್ಲಿ ವಿಶ್ರಮಿಸಿಕೊಂಡು, ಬೆಳಗಿನಿಂದ ಈವರೆಗೂ ಇಲ್ಲಿಯೇ ಇದ್ದಾಳೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:7
14 ತಿಳಿವುಗಳ ಹೋಲಿಕೆ  

ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.


ಬಡವನು ಬಿನ್ನೈಸುವನು; ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.


ಯೆಹೋವನ ಭಯವೇ ಜ್ಞಾನೋಪದೇಶ; ಗೌರವಕ್ಕೆ ಮೊದಲು ವಿನಯ.


ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರ್ರಿ.


ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.


ಮೋವಾಬ್ಯಳಾದ ರೂತಳು ನೊವೊವಿುಗೆ - ನಾನು ಹೋಗಿ ಯಾವನು ನನಗೆ ದಯೆತೋರಿಸುವನೋ ಅವನ ಹೊಲದಲ್ಲಿ ಹಕ್ಕಲತೆನೆಗಳನ್ನು ಕೂಡಿಸಿಕೊಂಡು ಬರುವೆನು ಅಂದಳು.


ಅವನು - ನೊವೊವಿುಯ ಸಂಗಡ ಬಂದ ಮೋವಾಬ್‍ಸ್ತ್ರೀಯು;


ಆಗ ಬೋವಜನು ರೂತಳಿಗೆ - ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇದ್ದುಕೊಂಡು


ಆಗ ಮೋವಾಬ್ಯಳಾದ ರೂತಳು - ಇದಲ್ಲದೆ ಆ ಮನುಷ್ಯನು ನನಗೆ - ಸುಗ್ಗಿಯೆಲ್ಲಾ ತೀರುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನೆ ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು