Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:11 - ಕನ್ನಡ ಸತ್ಯವೇದವು J.V. (BSI)

11 ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬದು ಊರಿನವರಿಗೆಲ್ಲಾ ಗೊತ್ತದೆ; ಆದದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಗಳೇ, ಭಯಪಡಬೇಡ, ನೀನು ಸುಗುಣಶೀಲೆ ಎಂದು ಊರಿಗೆಲ್ಲಾ ತಿಳಿದಿದೆ; ನೀನು ಕೇಳಿಕೊಂಡದ್ದನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತರುಣಿಯೇ, ಹೆದರಬೇಡ, ನಿನ್ನ ಇಚ್ಛೆಯನ್ನು ನೆರವೇರಿಸುತ್ತೇನೆ. ನೀನು ಒಳ್ಳೆಯ ಸ್ತ್ರೀ ಎಂಬುದು ನಮ್ಮ ಪಟ್ಟಣದವರಿಗೆಲ್ಲಾ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈಗ ನನ್ನ ಮಗಳೇ, ನೀನು ಭಯಪಡಬೇಡ. ನಿನಗೆ ಬೇಕಾಗಿರುವುದನ್ನು ನಿನಗೆ ಮಾಡುವೆನು. ನೀನು ಗುಣವತಿಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರೂ ಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:11
5 ತಿಳಿವುಗಳ ಹೋಲಿಕೆ  

ಗುಣವತಿಯಾದ ಸತಿಯು ಎಲ್ಲಿ ಸಿಕ್ಕಾಳು? ಆಕೆಯು ಹವಳಕ್ಕಿಂತಲೂ ಬಹು ಅಮೂಲ್ಯಳು.


ಗುಣವಂತೆಯು ಪತಿಯ ತಲೆಗೆ ಕಿರೀಟ; ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.


ನಾನು ಸಮೀಪ ಬಂಧುವೆಂಬದು ನಿಜ; ಆದರೂ ನನಗಿಂತ ಸಮೀಪನಾದವನು ಒಬ್ಬನಿರುತ್ತಾನೆ.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು