ರೂತಳು 3:14 - ಕನ್ನಡ ಸತ್ಯವೇದವು J.V. (BSI)14 ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತುಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬುವುದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತು ಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ರೂತಳು ಬೆಳಗಿನ ಜಾವದವರೆಗೂ ಬೋವಜನ ಪಾದಗಳ ಬಳಿಯಲ್ಲಿಯೇ ಮಲಗಿದ್ದು ಇನ್ನೂ ಕತ್ತಲಿರುವಾಗಲೇ ಎದ್ದಳು. ಬೋವಜನು ಅವಳಿಗೆ, “ನೀನು ನಿನ್ನೆ ರಾತ್ರಿ ನನ್ನಲ್ಲಿಗೆ ಬಂದಿದ್ದೆ ಎಂಬ ಸಂಗತಿಯು ರಹಸ್ಯವಾಗಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವಳು ಹಾಗೆಯೇ ಉದಯಕಾಲದವರೆಗೂ ಅವನ ಪಾದಗಳ ಬಳಿಯಲ್ಲಿ ಮಲಗಿದ್ದು ಯಾರಿಗೂ ಗೊತ್ತಾಗಬಾರದೆಂದು ಹೊತ್ತಿಗೆ ಮುಂಚೆ ಎದ್ದಳು. ಅವನು, “ಒಬ್ಬ ಸ್ತ್ರೀ ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯದಿರಲಿ,” ಎಂದನು. ಅಧ್ಯಾಯವನ್ನು ನೋಡಿ |