ರೂತಳು 3:15 - ಕನ್ನಡ ಸತ್ಯವೇದವು J.V. (BSI)15 ಆಗ ಅವನು ಆಕೆಗೆ - ನಿನ್ನ ಕಂಬಳಿಯನ್ನು ಹಾಸು ಎಂದು ಹೇಳಿ ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿದನು. ಆಕೆಯು ಊರೊಳಕ್ಕೆ ಹೋಗಿ ಅತ್ತೆಯ ಬಳಿಗೆ ಬಂದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಅವನು ಆಕೆಗೆ “ನಿನ್ನ ಮೇಲ್ಹೊದಿಕೆಯನ್ನು ಹಾಸು” ಎಂದು ಹೇಳಿದನು, ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿ ಕಳುಹಿಸಿದನು. ಆಕೆಯು ಊರೊಳಕ್ಕೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬೋವಜನು ಆಕೆಗೆ, “ನಿನ್ನ ಮೇಲ್ಹೊದಿಕೆಯನ್ನು ಹಾಸು,” ಎಂದು ಹೇಳಿ ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂನಷ್ಟು ಜವೆಗೋದಿಯನ್ನು ಸುರಿದು, ಅದನ್ನೆತ್ತಿ ಹೊರಿಸಿದನು. ಆಕೆ ಅದನ್ನು ಹೊತ್ತುಕೊಂಡು ಊರೊಳಗೆ ಹೋದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬೋವಜನು, “ನಿನ್ನ ಹೊದಿಕೆಯನ್ನು ಇಲ್ಲಿ ತೆಗೆದುಕೊಂಡು ಬಾ. ಅದನ್ನು ಸ್ವಲ್ಪ ಅಗಲಮಾಡಿ ಹಿಡಿದುಕೋ” ಎಂದನು. ರೂತಳು ತನ್ನ ಹೊದಿಕೆಯನ್ನು ಅಗಲಮಾಡಿ ಹಿಡಿದಳು. ಬೋವಜನು ಆರು ಸೇರಿನಷ್ಟು ಜವೆಗೋಧಿಯನ್ನು ಅದರಲ್ಲಿ ಸುರಿದು ಚೆನ್ನಾಗಿ ಕಟ್ಟಿ ಅವಳ ಮೇಲೆ ಹೊರಿಸಿದನು. ಬಳಿಕ ಆಕೆ ಊರೊಳಗೆ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವನು, “ನಿನ್ನ ಮೇಲ್ಹೊದಿಕೆಯನ್ನು ಹಿಡಿ,” ಎಂದನು. ಅವಳು ಅದನ್ನು ಹಿಡಿದಾಗ ಅವನು ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಅವಳು ಅದನ್ನು ಹೊತ್ತುಕೊಂಡು ಪಟ್ಟಣಕ್ಕೆ ಬಂದಳು. ಅಧ್ಯಾಯವನ್ನು ನೋಡಿ |