Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:2 - ಕನ್ನಡ ಸತ್ಯವೇದವು J.V. (BSI)

2 ನೀನು ಯಾವನ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಾಗಿರುತ್ತಾನಲ್ಲಾ! ಅವನು ಇಂದಿನ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬೋವಜನು ನಮ್ಮ ಸಂಬಂಧಿಕನಾಗಿದ್ದಾನೆ. ನೀನು ಅವನ ಹೆಣ್ಣಾಳುಗಳ ಜೊತೆಯಲ್ಲಿದ್ದುಕೊಂಡು ಹಕ್ಕಲಾಯ್ದಿರುವೆ. ಇಂದು ರಾತ್ರಿ ಅವನು ಕಣದಲ್ಲಿ ಜವೆಗೋಧಿಯನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈಗ ನೀನು ಯಾರ ದಾಸಿಯರ ಸಂಗಡ ಇದ್ದೀಯೋ, ಆ ಬೋವಜನು ನಮ್ಮ ಬಂಧುವಾಗಿದ್ದಾನೆ. ಇಗೋ, ಅವನು ರಾತ್ರಿಯಲ್ಲಿ ಕಣದಲ್ಲಿ ಜವೆಗೋಧಿಯನ್ನು ತೂರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:2
8 ತಿಳಿವುಗಳ ಹೋಲಿಕೆ  

ಆಗ ಬೋವಜನು ರೂತಳಿಗೆ - ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇದ್ದುಕೊಂಡು


ನೊವೊವಿುಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಒಬ್ಬ ಧನವಂತನಾದ ಸಂಬಂಧಿಯಿದ್ದನು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.


ನೊವೊವಿುಯು ಸೊಸೆಗೆ - ನನ್ನ ಮಗಳೇ, ನೀನು ಗೃಹಿಣಿಯಾಗಿ ಸುಖದಿಂದಿರುವದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ.


ನೀನು ಸ್ನಾನಮಾಡಿ ತೈಲಹಚ್ಚಿಕೊಂಡು ಶ್ರೇಷ್ಠವಸ್ತ್ರಗಳನ್ನುಟ್ಟು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು