ರೂತಳು 3:4 - ಕನ್ನಡ ಸತ್ಯವೇದವು J.V. (BSI)4 ಅವನು ಮಲಗಿದ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಅಲ್ಲೇ ಮಲಗಿಕೋ; ಆಮೇಲೆ ಮಾಡತಕ್ಕದ್ದನ್ನು ನಿನಗೆ ತಿಳಿಸುವನು ಅಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಮಲಗಿದ ಸ್ಥಳವನ್ನು ತಿಳಿದುಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದು ಬಿಟ್ಟು ಅಲ್ಲೇ ಮಲಗಿಕೋ; ಆ ಮೇಲೆ ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುವನು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ಎಲ್ಲಿ ಮಲಗುತ್ತಾನೆ ಎಂಬುದನ್ನು ಗೊತ್ತುಮಾಡಿಕೊ. ಅವನು ಮಲಗಿದ ಮೇಲೆ ಅಲ್ಲಿಗೆ ಹೋಗು. ಅವನ ಪಾದಗಳ ಮೇಲಿನ ಹೊದಿಕೆಯನ್ನು ಮೆತ್ತಗೆ ಸರಿಸಿಬಿಟ್ಟು ಪಕ್ಕದಲ್ಲೇ ಮಲಗು. ಆಮೇಲೆ ನೀನು ಮಾಡಬೇಕಾದುದೇನೆಂಬುದನ್ನು ಅವನೇ ತಿಳಿಸುವನು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಊಟವಾದ ಮೇಲೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕಾಗಿ ಅವನು ಮಲಗುತ್ತಾನೆ. ಅವನು ಎಲ್ಲಿ ಮಲಗುತ್ತಾನೆಂಬುದನ್ನು ನೋಡಿಕೊಂಡಿದ್ದು ಅಲ್ಲಿಗೆ ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅಲ್ಲಿಯೇ ಮಲಗಿಕೋ. ನೀನು ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುತ್ತಾನೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳಿದುಕೊಂಡು ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು,” ಎಂದಳು. ಅಧ್ಯಾಯವನ್ನು ನೋಡಿ |