ರೂತಳು 4:1 - ಕನ್ನಡ ಸತ್ಯವೇದವು J.V. (BSI)1 ಬೋವಜನು ಹೋಗಿ ಊರುಬಾಗಲಲ್ಲಿ ಕೂತನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿರುವದನ್ನು ಕಂಡು ಅವನನ್ನು - ಎಲಾ, ಅಪ್ಪಾ, ಇತ್ತ ಬಂದು ಕೂತುಕೋ ಎಂದು ಕರೆಯಲು ಅವನು ಬಂದು ಕೂತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಅಲ್ಲಿಂದ ಹಾದು ಹೋಗುವವರೆಗೂ ಅವನು ಅಲ್ಲಿಯೇ ಕುಳಿತಿದ್ದನು. ಅವನನ್ನು ಕಂಡ ಬೋವಜನು, “ಸ್ನೇಹಿತನೇ ಇಲ್ಲಿ ಬಾ, ಇಲ್ಲಿ ಕುಳಿತುಕೋ” ಎಂದು ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬೋವಜನು ಪಟ್ಟಣದ ಬಾಗಿಲ ಬಳಿ ಹೋಗಿ ಕುಳಿತುಕೊಂಡನು. ಆಗ ಬೋವಜನು ಹೇಳಿದ್ದ ಆ ವಿಮೋಚಕ ಬಂಧುವು ಹಾದುಹೋಗುತ್ತಿದ್ದನು. ಬೋವಜನು ಅವನಿಗೆ, “ನನ್ನ ಸ್ನೇಹಿತನೇ, ಈ ಕಡೆಗೆ ಬಂದು ಇಲ್ಲಿ ಕುಳಿತುಕೋ,” ಎಂದನು. ಅವನು ಬಂದು ಕುಳಿತುಕೊಂಡನು. ಅಧ್ಯಾಯವನ್ನು ನೋಡಿ |