Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:10 - ಕನ್ನಡ ಸತ್ಯವೇದವು J.V. (BSI)

10 ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ನಿಂತು ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಮೋವಾಬ್ಯಳೂ ಅವನ ಹೆಂಡತಿಯೂ ಆದ ರೂತಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, ಮಹ್ಲೋನನ ಪತ್ನಿಯಾದ ಮೋವಾಬ್ಯದ ರೂತಳನ್ನು ನನ್ನ ಹೆಂಡತಿಯನ್ನಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆ ಗತಿಸಿದ ಮಹ್ಲೋನನ ಹೆಸರಿನಲ್ಲೇ ಉಳಿಯುವುದು. ಮಾತ್ರವಲ್ಲ, ಅವನ ವಂಶವೃಕ್ಷವು ಅವನ ಬಂಧುಬಳಗದವರಲ್ಲೂ ಊರಿನಲ್ಲೂ ನೆಲೆಯಾಗಿರುವುದು. ಇದಕ್ಕೆ ನೀವೆಲ್ಲರೂ ಸಾಕ್ಷಿಗಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೋವಾಬ್ಯಳೂ ಮಹ್ಲೋನನ ಹೆಂಡತಿಯೂ ಆಗಿದ್ದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳುತ್ತೇನೆ. ಸತ್ತುಹೋದ ಮನುಷ್ಯನ ಆಸ್ತಿಯು ಅವನ ಹೆಸರಿನಲ್ಲಿ ಉಳಿಯಲೆಂದು ನಾನು ಹೀಗೆ ಮಾಡುತ್ತಿದ್ದೇನೆ. ಹೀಗೆ ಮಾಡುವುದರಿಂದ ಸತ್ತವನ ಹೆಸರು ಅವನ ಕುಟುಂಬದಲ್ಲಿಯೂ ಅವನ ಆಸ್ತಿಯಲ್ಲಿಯೂ ಉಳಿಯುವುದು. ಇದಕ್ಕೆ ನೀವೇ ಸಾಕ್ಷಿಯಾಗಿದ್ದೀರಿ” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಸತ್ತವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆಯು ಗತಿಸಿದ ಮಹ್ಲೋನನ ಹೆಸರಿನಲ್ಲಿಯೇ ಉಳಿಯುವುದು. ಅವನ ಹೆಸರೂ ಅವನ ವಂಶವೂ ಊರಲ್ಲಿಯೇ ನೆಲೆಯಾಗಿರುವುದು. ಇದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:10
19 ತಿಳಿವುಗಳ ಹೋಲಿಕೆ  

ಅವಳಲ್ಲಿ ಹುಟ್ಟುವ ಚೊಚ್ಚಲುಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು; ಹೀಗೆ ಆಗುವದರಿಂದ ಸತ್ತವನ ಹೆಸರು ಇಸ್ರಾಯೇಲ್ಯರೊಳಗಿಂದ ನಾಶವಾಗಿ ಹೋಗುವದಿಲ್ಲ.


ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಯಾಕೋಬನು ಪದ್ದನ್ ಅರಾವಿುಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ [ಕುರಿಗಳನ್ನು] ಕಾದನು.


ನಾನು ಹದಿನೈದು ರೂಪಾಯಿಯನ್ನೂ ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡು ಅವಳಿಗೆ -


ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳ ಪ್ರಕಾರವೂ ಅಸಂಖ್ಯಾತರಾಗುತ್ತಿದ್ದರು; ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.


ಮನೆಮಾರೂ ಆಸ್ತಿಪಾಸ್ತಿಯೂ ಪಿತೃಗಳಿಂದ ದೊರಕುವವು; ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.


ಪತ್ನೀಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.


ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂವಿುಯಿಂದ ತೆಗೆದುಹಾಕಲಿ.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ಕಾನಾನ್ಯರೂ ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತಿಕೊಂಡು ಭೂಲೋಕದಲ್ಲಿ ನಮ್ಮ ಹೆಸರುಳಿಯದಂತೆ ಮಾಡುವರು. ನಿನ್ನ ಮಹಾನಾಮಕ್ಕೋಸ್ಕರ ಏನು ಮಾಡುವಿ ಅಂದನು.


ಆಕೆಯ [ಮದುವೆಯ] ವಾರವನ್ನು ಪೂರೈಸು; ಅನಂತರ ಈ ನನ್ನ ಕಿರೀ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರುಷ ಸೇವೆಮಾಡು ಅಂದನು.


ಆಗ ಬೋವಜನು ಹಿರಿಯರಿಗೂ ಎಲ್ಲಾ ಜನರಿಗೂ - ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬವರಿಗಿದ್ದದ್ದನ್ನೆಲ್ಲಾ ನೊವೊವಿುಯಿಂದ ತೆಗೆದುಕೊಂಡಿದ್ದೇನೆ;


ಆದರೆ ಓನಾನನು ಈ ರೀತಿಯಾಗಿ ಆಗುವ ಸಂತಾನವು ತನ್ನದಾಗುವದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಲೊಲ್ಲದೆ ತನ್ನ ಅತ್ತಿಗೆಯಲ್ಲಿ ಸಂಗಮಮಾಡುವಾಗೆಲ್ಲಾ ತನ್ನ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು