Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:14 - ಕನ್ನಡ ಸತ್ಯವೇದವು J.V. (BSI)

14 ಆಗ ಹೆಂಗಸರು ನೊವೊವಿುಗೆ - ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಹೆಸರು ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಹೆಂಗಸರು ನವೊಮಿಗೆ “ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಸರ್ವೇಶ್ವರ ಸ್ವಾಮಿಗೆ ಸ್ತುತಿ ಸ್ತೋತ್ರ! ನಿನಗೊಬ್ಬ ವಂಶೋದ್ಧಾರಕನನ್ನು ಅನುಗ್ರಹಿಸಿದ ಇಸ್ರಯೇಲ್ ನಾಡಿನಲ್ಲಿ ಆ ಮಗು ಪ್ರಖ್ಯಾತನಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಗರದ ಸ್ತ್ರೀಯರು ನೊವೊಮಿಗೆ, “ನಿನಗೆ ಈ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಇವನು ಇಸ್ರೇಲಿನಲ್ಲಿ ಸುಪ್ರಸಿದ್ಧನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಸ್ತ್ರೀಯರು ನೊವೊಮಿಗೆ, “ಇಸ್ರಾಯೇಲಿನಲ್ಲಿ ವಿಮೋಚಿಸತಕ್ಕ ಬಾಧ್ಯಸ್ಥನನ್ನು ನಿನಗೆ ಅನುಗ್ರಹಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಈ ಮಗನು ಪ್ರಖ್ಯಾತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:14
13 ತಿಳಿವುಗಳ ಹೋಲಿಕೆ  

ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ದಯವನ್ನು ವಿಶೇಷವಾಗಿ ತೋರಿಸಿದ್ದಾನೆಂಬದನ್ನು ಕೇಳಿ ಆಕೆಯ ಕೂಡ ಸಂತೋಷಪಟ್ಟರು.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಆಕೆಯು ತಿರಿಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು - ಈಗ ಯೆಹೋವನಿಗೆ ಉಪಕಾರಸ್ತುತಿ ಮಾಡುವೆನು ಎಂದು ಹೇಳಿ ಅದಕ್ಕೆ ಯೆಹೂದಾ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಗರ್ಭಧಾರಣೆಯಾಗುವದು ತಡವಾಯಿತು.


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು