ರೋಮಾಪುರದವರಿಗೆ 1:17 - ಕನ್ನಡ ಸತ್ಯವೇದವು J.V. (BSI)17 ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ವಿಶ್ವಾಸಾಚ್ಯಾ ವೈನಾ ಚಾಲು ಹೊಲ್ಲ್ಯಾಕ್ನಾ ಧರುನ್ ಆಕ್ರಿ ಪತರ್ ದೆವ್ ಅಪ್ನಿ ಸ್ವತಾ ಅಪ್ನಾಚ್ಯಾ ಲೊಕಾಕ್ನಿ ಬರೆ ಜಿವನ್ ಕರ್‍ತಲ್ಯಾ ವಾಟೆರ್ ಕಶೆ ರಾಕುನ್ ಥವ್ತಾ ಮನುನ್ ಬರಿ ಖಬರ್ ದಾಕ್ವುನ್ ದಿತಾ. ಹೆ ಸುರ್ವಾತೆಕ್ನಾ ಆಕ್ರಿ ಪತರ್ ಖರೆ ಹಾಯ್. ಪವಿತ್ರ್ ಪುಸ್ತಕ್ ಮನ್ತಾ, ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಬರ್‍ಯಾ ವಾಟೆರ್ ಚಲ್ತಲೊ ಮಾನುಸ್ ಜಿವನ್ ಕರ್‍ತಾ. ಅಧ್ಯಾಯವನ್ನು ನೋಡಿ |