ರೋಮಾಪುರದವರಿಗೆ 1:18 - ಕನ್ನಡ ಸತ್ಯವೇದವು J.V. (BSI)18 ದುಷ್ಟತನವನ್ನು ನಡಿಸಿ ಸತ್ಯವನ್ನು ಅಣಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ತೋರಿಬರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮಾನವರ ಎಲ್ಲಾ ಪಾಪಾಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಕೃತ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದುಷ್ಟತನದಿಂದ ಸತ್ಯವನ್ನು ಅಡಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆ ಹಾಗೂ ದುಷ್ಟತನದ ಮೇಲೆ ದೇವರ ರೌದ್ರವು ಪರಲೋಕದಿಂದ ಪ್ರಕಟವಾಗುತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಬುರ್ಶ್ಯಾಪಾನಾನ್ ಖರೆಪಾನಾಕ್ ಅಡ್ಕಳ್ ಹೊತಲ್ಯಾ ಸಗ್ಳ್ಯಾ ಬುರ್ಶ್ಯಾ ಮಾನ್ಸಾಂಚ್ಯಾ ಸಗ್ಳ್ಯಾ ಪಾಪಾ ಅನಿ ವಾಯ್ಟಾಚ್ಯಾ ವರ್‍ತಿ ದೆವಾಚೊ ರಾಗ್ ಸರ್‍ಗಾ ವೈನಾ ಉತ್ರುನ್ ಯೆಲಾ. ಅಧ್ಯಾಯವನ್ನು ನೋಡಿ |